ಕುರ್ಚಿ ಕದನದ ನಡುವೆ ಪೋಸ್ಟ್ ಕಾಳಗ: ಡಿಕೆಶಿಗೆ ಸಿದ್ದರಾಮಯ್ಯ ನೇರಾನೇರ ಕೌಂಟರ್

ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವಿನ ಕುರ್ಚಿ ಕಾಳಗ ಈಗ ಪೋಸ್ಟ್ ವಾರ್ ತನಕ ತಲುಪಿದೆ. ಕೊಟ್ಟ ಮಾತಿನ ಶಕ್ತಿಯೇ ಜಗತ್ತಿನ ಶಕ್ತಿ ಎಂಬ ಡಿಕೆಶಿ ಪೋಸ್ಟ್ಗೆ ಸಿದ್ದರಾಮಯ್ಯ ನೇರಾ ನೇರ ಕೌಂಟರ್ ಕೊಟ್ಟಿದ್ದಾರೆ. ಆ ಮೂಲಕ ಪಟ್ಟದ ಕದನ ಮತ್ತೊಂದು ಹಂತ ತಲುಪಿದೆ. ಕರ್ನಾಟಕದ ಜನತೆಗೆ ನಾವು ಕೊಟ್ಟ ಮಾತು ಕೇವಲ ಘೋಷಣೆ ಅಲ್ಲ, ನಾವು ಜನತೆಗೆ ಕೊಟ್ಟ ಮಾತೇ ನಮಗೆ ಜಗತ್ತು ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರೋದು […]
Mangaluru | ಹೊಟ್ಟೆ ಹಸಿದಾಗ ಬರುವ ಶಬ್ದ ಕೇಳಿ ಫುಡ್ ಆರ್ಡರ್ ಮಾಡುವ AI ಸಾಧನ ಕಂಡುಹಿಡಿದ ಕುಡ್ಲದ ಯುವಕ

ಕೃತಕ ಬುದ್ಧಿಮತ್ತೆ (AI)ಯಲ್ಲಿ ವಿಭಿನ್ನ ಅಪ್ಡೇಟ್ಗಳು ಬಂದಿದೆ. ಮನುಷ್ಯರು ಈ ಕೃತಕ ಬುದ್ಧಿಮತ್ತೆಯನ್ನು ಆಳವಾಗಿ ಅವಲಂಬಿಸಿಕೊಂಡಿದ್ದಾರೆ. ಇಂದಿನ ಯುವಕರು ಎಐ ಮೂಲಕ ಹಲವು ಹೊಸ ಹೊಸ ವಿಚಾರಗಳನ್ನು ಸಂಶೋಧನೆ ಮಾಡಿದ್ದಾರೆ. ಇದೀಗ ಮಂಗಳೂರಿನ ಯುವಕ ಮಾಡಿದ ಈ ಎಐ ಆವಿಷ್ಕರ ಭಾರೀ ಸುದ್ದಿ ಮಾಡಿದೆ. ಮಂಗಳೂರಿನ ಸೋಹನ್ ಎಂ ರೈ ಎಂಬ ಯುವಕ ಕೃತಕ ಬುದ್ಧಿಮತ್ತೆ (AI) ಚಾಲಿತ ಸಾಧನದ ಬಗ್ಗೆ ವಿಡಿಯೋವೊಂದು ಹಂಚಿಕೊಂಡಿದ್ದಾರೆ. ಹೊಟ್ಟೆ ಹಸಿವಿನಿಂದ ಘರ್ಜಿಸಿದ್ರೆ ಈ ಕೃತಕ ಬುದ್ಧಿಮತ್ತೆ ಚಾಲಿತ ಸಾಧನ ಸ್ವಯಂಚಾಲಿತವಾಗಿ […]
ಡಿಕೆ ಶಿವಕುಮಾರ್ ಸಿಎಂ ಆಗದಿದ್ದಲ್ಲಿ ರಾಜ್ಯದಲ್ಲಿರುವ ಸರ್ಕಾರ ಪತನ: ವೀರೇಶ್ವರ ಸ್ವಾಮೀಜಿ ಭವಿಷ್ಯ!

ಬೆಳಗಾವಿ: ರಾಜ್ಯದಲ್ಲಿ ಸಿಎಂ ಗದ್ದುಗೆ ಬದಲಾವಣೆ ವಿಚಾರದಲ್ಲಿ ಇದೀಗ ಸ್ವಾಮೀಜಿಗಳು ಅಖಾಡಕ್ಕಿಳಿದಿದ್ದು, ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ಗೆ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ನಂತರ ಇದೀಗ ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಬಿಟ್ಟಕೊಡದೇ ಇದ್ದಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಲು ಡಿಕೆ ಶಿವಕುಮಾರ್ ಅವರು ಸಹಕಾರ […]
‘HR88 B8888’ ಭಾರತದ ಅತ್ಯಂತ ದುಬಾರಿ ಕಾರು ನೋಂದಣಿ ಸಂಖ್ಯೆ; ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ..!

ನವದೆಹಲಿ: ಹರ್ಯಾಣದಲ್ಲಿ ನೋಂದಣಿಯಾದ ಕಾರು ಒಂದರ ನೋಂದಣಿ ಸಂಖ್ಯೆ ಇದೀಗ ದಾಖಲೆ ನಿರ್ಮಿಸಿದ್ದು, ದೇಶದ ಅತ್ಯಂತ ದುಬಾರಿ ನೋಂದಣಿ ಸಂಖ್ಯೆ ಎಂಬ ಕೀರ್ತಿಗೆ ಭಾಜನವಾಗಿದೆ. ಪ್ರತೀಯೊಬ್ಬ ಕಾರು ಮಾಲೀಕರು ತಮ್ಮ ಕಾರಿನ ನೋಂದಣಿ ಸಂಖ್ಯೆ ವಿಶೇಷವಾಗಿರಬೇಕು ಎಂದು ಭಾವಿಸುತ್ತಾರೆ. ಅದರಲ್ಲೂ ಕೆಲ ಕಾರು ಮಾಲೀಕರು ತಮ್ಮ ಕಾರಿನ ಸಂಖ್ಯೆಯನ್ನೇ ಪ್ರತಿಷ್ಛೆಯನ್ನಾಗಿ ಸ್ವೀಕರಿಸಿ ಫ್ಯಾನ್ಸಿ ನಂಬರ್ ಗಳಿಗಾಗಿ ಕೋಟಿ ಕೋಟಿ ಹಣ ವ್ಯಯಿಸುತ್ತಾರೆ. ಇದೀಗ ಈ ಪಟ್ಟಿಗೆ ಮತ್ತೊಂದು ಸಂಖ್ಯೆ ಸೇರ್ಪಡೆಯಾಗಿದ್ದು, ಹರ್ಯಾಣದ ಈ ಸಂಖ್ಯೆ ಬರೊಬ್ಬರಿ 1.17 […]
Hassan | ಅಪ್ರಾಪ್ತೆಯ ಬೆನ್ನು ಬಿದ್ದು ಪ್ರೀತಿಸುವಂತೆ ಕಿರುಕುಳ: ಆಟೋ ಡ್ರೈವರ್ ಅರೆಸ್ಟ್

ಹಾಸನ: ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದು ಪ್ರೀತಿಸುವಂತೆ ಪ್ರತಿದಿನ ಕಿರುಕುಳ ನೀಡುತ್ತಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಮನು (27) ಬಂಧಿತ ಆಟೋ ಚಾಲಕ. ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ ಮನು ಪ್ರೀತಿಸುವಂತೆ ವಿದ್ಯಾರ್ಥಿನಿಗೆ ಮಾನಸಿಕ ಹಿಂಸೆ ನೀಡುತ್ತಿದ್ದ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ರಸ್ತೆಯಲ್ಲಿ ವಿದ್ಯಾರ್ಥಿನಿಯ ಮೈಕೈ ಮುಟ್ಟಿ ಎಳೆದಾಡಿದ್ದ. ಆಟೋ ಚಾಲಕನ ಕಿರುಕುಳದಿಂದ ಬೇಸತ್ತಿದ್ದ ಅಪ್ರಾಪ್ತ ಬಾಲಕಿ ತಮ್ಮ ಪೋಷಕರ ಬಳಿ […]
ಯು.ಟಿ. ಖಾದರ್ ಗಿಂತ ನಾನು ಹಿರಿಯ, ನನಗೆ ಹಿಂದೆಯೇ ಸಚಿವ ಸ್ಥಾನ ಸಿಗಬೇಕಿತ್ತು: ಶಾಸಕ ಹ್ಯಾರಿಸ್

ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಾನು ಹಿರಿಯನಾಗಿದ್ದು, ನನಗೆ ಈ ಹಿಂದೆಯೇ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬೇಕಿತ್ತು, ಆದರೆ ಈವರೆಗೆ ದೊರತಿಲ್ಲ ಎಂದು ಶಾಸಕ ಎನ್.ಎ. ಹ್ಯಾರಿಸ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಬುಧವಾರ ಮಾಧ್ಯಮದ ಜತೆ ಮಾತನಾಡಿದ ಅವರು, ಪಕ್ಷದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗಿಂತಲೂ ನಾನು ಹಿರಿಯ. ಆದರೂ ನಮ್ಮಿಬ್ಬರ ನಡುವೆ ಯಾವುದೇ ರಾಜಕೀಯವಿಲ್ಲ. ಅವರಿಗೂ ಸಚಿವ ಸ್ಥಾನ ಸಿಗಲಿ, ನನಗೂ ಸಿಗಲಿ. ಆಗ ಪಕ್ಷಕ್ಕೂ, ರಾಜ್ಯಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ […]
ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ; ಬೆಳ್ಳಂ ಬೆಳಗ್ಗೆಯೇ ಡಿಕೆಶಿ ಪೋಸ್ಟ್, ಏನಿದರ ಮರ್ಮ?

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಧಿಕಾರ ಹಂಚಿಕೆ ವಿಚಾರ ಕೋಲಾಹಲವನ್ನೇ ಸೃಷ್ಟಿಸುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಕುರ್ಚಿ ಕಾದಾಟ ಹೈಕಮಾಂಡ್ಗೆ ದೊಡ್ಡ ತಲೆಬಿಸಿಯಾಗಿದೆ. ದೆಹಲಿ ಅಂಗಳದಲ್ಲಿ ಕರ್ನಾಟಕ ಪಾಲಿಟಿಕ್ಸ್ ಚರ್ಚೆ ಜೋರಾಗಿದೆ. ಇದರ ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್ ಬೆಳ್ಳಂ ಬೆಳಗ್ಗೆಯೇ ಟ್ವೀಟ್ ಬಾಂಬ್ ಸಿಡಿಸಿದ್ದಾರೆ. ಪವರ್ ಶೇರಿಂಗ್ ವಿಚಾರದ ಬಗ್ಗೆ ಹೈಕಮಾಂಡ್ನಲ್ಲಿ ಭಾರೀ ಚರ್ಚೆ ಆಗ್ತಿರುವಾಗಲೇ ಇಂದು (ನವೆಂಬರ್ 27) ಬೆಳ್ಳಂ ಬೆಳಗ್ಗೆಯೇ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ […]
ಭಾರತದ ಸಿಇಸಿ ಜ್ಞಾನೇಶ್ ಕುಮಾರ್ ಗೆ ವಿಶ್ವ ಚುನಾವಣಾ ಸಂಸ್ಥೆಯ ಅಧ್ಯಕ್ಷ ಹುದ್ದೆ!

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು 2026 ರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ಸಹಾಯ ಸಂಸ್ಥೆಯ (ಅಂತರರಾಷ್ಟ್ರೀಯ ಐಡಿಇಎ) ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಜ್ಞಾನೇಶ್ ಕುಮಾರ್ ಡಿಸೆಂಬರ್ 3 ರಂದು ಸ್ಟಾಕ್‌ಹೋಮ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಐಡಿಇಎ ಸದಸ್ಯ ರಾಷ್ಟ್ರಗಳ ಮಂಡಳಿಯ ಸಭೆಯಲ್ಲಿ ಐಐಡಿಇಎ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಧ್ಯಕ್ಷರಾಗಿ, ಅವರು 2026 ರ ಅವಧಿಯಲ್ಲಿ ಎಲ್ಲಾ ಮಂಡಳಿ ಸಭೆಗಳ ಅಧ್ಯಕ್ಷತೆ ವಹಿಸಲಿದ್ದಾರೆ. 1995 ರಲ್ಲಿ ಸ್ಥಾಪನೆಯಾದ ಅಂತರರಾಷ್ಟ್ರೀಯ […]
ರೊಟ್ಟಿಗುಡ್ಡೆ | ರಾಷ್ಟ್ರೀಯ ಹೆದ್ದಾರಿ ಸಮೀಪ ಚರಂಡಿ ಸಮಸ್ಯೆ: ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ

ರೊಟ್ಟಿಗುಡ್ಡೆ: ತುಂಬೆ ಗ್ರಾಮದ ರೊಟ್ಟಿಗುಡ್ಡೆ ಬಳಿ ರಾಷ್ಟ್ರೀಯ ಹೆದ್ದಾರಿಯ ಚರಂಡಿ ಅವ್ಯವಸ್ಥೆಯಿಂದ ಸಾರ್ವಜನಿಕರು ಹಾಗೂ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರು, ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವ್ಯವಸ್ಥೆ ನಿರ್ಮಾಣವಾಗಿದ್ದು, ಕಲುಷಿತ ನೀರು ಸರಗವಾಗಿ ಕೆಳಗೆ ಹಾದುಹೋಗುತ್ತದೆ. ಆದರೆ ಚರಂಡಿ ಇಲ್ಲದ ಕಾರಣ ಅಲ್ಲಿಯೇ ಉಳಿದು ಗಬ್ಬುನಾತ ಬೀರುತ್ತಿದೆ. ಕೊಳಚೆ ನೀರು ಚರಂಡಿ ಸೇರದೆ ಇರುವುದರಿಂದ ಸೊಳ್ಳೆಕಾಟ ಹೆಚ್ಚಾಗಿದೆ. ರಸ್ತೆಯ ಅಕ್ಕಪಕ್ಕ ನಿವಾಸಿಗಳು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಕಾಲಕಳೆಯುವಂತಾಗಿದೆ. […]
ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನನಗೆ ಮುಖ್ಯ: ಡಿ ಕೆ ಶಿವಕುಮಾರ್

ಬೆಂಗಳೂರು: ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ ನನಗೆ. ಈ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಜೊತೆ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. “ನಾನು ಪಕ್ಷದ ಅಧ್ಯಕ್ಷ, ಸತೀಶ್ ಜಾರಕಿಹೊಳಿ ಅವರು ಪಕ್ಷದ ಕಾರ್ಯಾಧ್ಯಕ್ಷರು. […]