Flash News

ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

ಬೆಂಗಳೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿಸಿದ್ದು, ಗಡಿಪಾರು ಆದೇಶವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಸೂಕ್ತ ಕಾರಣ, ಸೆಕ್ಷನ್​ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ. ಧರ್ಮಸ್ಥಳದ ಬುರುಡೆ ಪ್ರಕರಣ […]

ಸೌದಿ ಅರೇಬಿಯಾದಲ್ಲಿ ಡೀಸೆಲ್​ ಟ್ಯಾಂಕರ್​ಗೆ ಬಸ್ ಡಿಕ್ಕಿ; 42 ಭಾರತೀಯರ ಸಜೀವ ದಹನ, ಸಹಾಯವಾಣಿ ಆರಂಭ

ಸೌದಿ: ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ದುರಂತವೊಂದು ಸೋಮವಾರ ಸಂಭವಿಸಿದೆ. ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು. ಈ ವೇಳೆ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಸ್ಸಿನಲ್ಲಿದ್ದ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ […]

ಸ್ಟಾರ್‌ಬಕ್ಸ್ ಕಾಫಿ ಬಹಿಷ್ಕರಿಸಲು ಕರೆ ನೀಡಿದ ನ್ಯೂಯಾರ್ಕ್‌ ನೂತನ ಮೇಯರ್‌ ಜೊಹ್ರಾನ್ ಮಾಮ್ದಾನಿ

ನ್ಯೂಯಾರ್ಕ್: ಕಾಫಿ ಬಾರ್‌ಗಳನ್ನು ನಡೆಸುವ ಜಗದ್ವಿಖ್ಯಾತ ಸಂಸ್ಥೆ ಸ್ಟಾರ್‌ಬಕ್ಸ್‌ನ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ನ್ಯೂಯಾರ್ಕ್‌ನ ನೂತನ ಮೇಯರ್‌ ಜೊಹ್ರಾನ್‌ ಮಮ್ದಾನಿ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಇದಕ್ಕೆ ಕಾರಣ ಅಮೆರಿಕದ 40ಕ್ಕೂ ಹೆಚ್ಚು ನಗರಗಳಲ್ಲಿ ಸ್ಟಾರ್‌ಬಕ್ಸ್ ಉದ್ಯೋಗಿಗಳು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ. ಮುಷ್ಕರಕ್ಕೆ ಬೆಂಬಲ ಸೂಚಿಸಿರುವ ನ್ಯೂಯಾರ್ಕ್ ನಗರದ ನೂತನ ಮೇಯರ್ ಮಾಮ್ದಾನಿ, ‘ಒಪ್ಪಂದವಿಲ್ಲದೆ ಕಾಫಿ ಇಲ್ಲ’ ಎಂದು ಘೋಷಿಸಿದ್ದಾರೆ. ಸ್ಟಾರ್‌ಬಕ್ಸ್‌ನ ವಾರ್ಷಿಕ ಪ್ರಚಾರ ದಿನವಾದ ‘ರೆಡ್ ಕಪ್ ಡೇ’ಯಂದೇ ಸಂಸ್ಥೆಯ ಉದ್ಯೋಗಿಗಳಿಂದ ಈ ಮುಷ್ಕರ ಆರಂಭವಾಗಿದೆ. ಈ ದಿನದಂದು […]

ದೆಹಲಿ ಕಾರು ಸ್ಫೋಟ ಪ್ರಕರಣ | ಯಾವುದೇ ಪುರಾವೆಗಳಿಲ್ಲ; ಮೂವರು ವೈದ್ಯರು ಸೇರಿ ನಾಲ್ವರನ್ನು ಬಿಡುಗಡೆ ಮಾಡಿದ NIA

ನವದೆಹಲಿ: ಕೆಂಪು ಕೋಟೆ ಸಮೀಪ ನ. 10ರಂದು ನಡೆದ ಭೀಕರ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ವೈದ್ಯರು ಸೇರಿದಂತೆ ನಾಲ್ವರನ್ನು ರವಿವಾರ ಬಿಡುಗಡೆ ಮಾಡಲಾಗಿದೆ. ಯಾವುದೇ ದೃಢ ಪುರಾವೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಿಡುಗಡೆ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಎಂದು India Today ವರದಿ ಮಾಡಿದೆ. ಹರಿಯಾಣದ ನುಹ್ ನಲ್ಲಿ ಬಂಧಿಸಲಾಗಿದ್ದ ಡಾ. ರೆಹಾನ್, ಡಾ. ಮುಹಮ್ಮದ್, ಡಾ. ಮುಸ್ತಕೀಮ್ ಹಾಗೂ ರಸಗೊಬ್ಬರ ವ್ಯಾಪಾರಿ ದಿನೇಶ್ ಸಿಂಗ್ಲಾ, ಈ ನಾಲ್ವರೂ […]

ಸಹಕಾರ ರಂಗ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರರಂಗ ದೇಶದ ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡುವ ಮೂಲಕ ಗ್ರಾಮೀಣ ಜನರಿಗೆ ಶಕ್ತಿ ನೀಡಿದೆ. ದೇಶದ ಅಭಿವೃದ್ಧಿಗೆ ಸಹಕಾರರಂಗ ಅಪಾರ ಕೊಡುಗೆ ನೀಡುತ್ತಿದೆ ಎಂದು ಕರ್ನಾಟಕ ರಾಜ್ಯ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಶ್ಲಾಘಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬ ದ್ಯೇಯ ವಾಕ್ಯ ದೊಂದಿಗೆ ನಗರದ ಕರಾವಳಿ […]

ಮಂಗಳೂರು: ಸಹಕಾರ ಸಪ್ತಾಹ ಮೆರವಣಿಗೆ ಉದ್ಘಾಟನೆ

ಮಂಗಳೂರು : 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಸಹಕಾರ ಸಪ್ತಾಹ ಆಚರಣೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.) ಮಂಗಳೂರು, […]

ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಣೆ : RSS ಕಾರ್ಯಕರ್ತ ಆತ್ಮಹತ್ಯೆ

ತಿರುವನಂತಪುರಂ : ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ಸ್ಥಳೀಯ ಆರೆಸ್ಸೆಸ್ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.ತೃಕ್ಕಣ್ಣಾಪುರದ ಆನಂದ್ ಕೆ ಥಂಪಿ ತನ್ನ ಮನೆಯ ಆವರಣದಲ್ಲಿರುವ ಶೆಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಿರುವನಂತಪುರಂ ಕಾರ್ಪೊರೇಷನ್‌ನ ತೃಕ್ಕಣ್ಣಾಪುರಂ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಥಂಪಿ ಬಯಸಿದ್ದರು. ಆದರೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ. ಇದರಿಂದ ಅವರು ಅಸಮಾಧಾನಗೊಂಡಿದ್ದರು ಎಂದು ತಿಳಿದು ಬಂದಿದೆ. ನಂತರ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ […]

ಮಂಗಳೂರು: ನ.16ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ಮಂಗಳೂರು: ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರು ಕರಾವಳಿ ಉತ್ಸವ ಮೈದಾನದಲ್ಲಿ ಸಿದ್ಧತೆಗಳನ್ನು ವೀಕ್ಷಿಸಿ ಮಾಹಿತಿ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರದಂದು ಬೆಂಗಳೂರಿನಲ್ಲಿ ಸಹಕಾರ ಮಂತ್ರಿ ಹಾಗೂ ಮುಖ್ಯಮಂತ್ರಿಗಳೂ ಆಗಿರುವ ಸಿದ್ದರಾಮಯ್ಯನವರು ರಾಜ್ಯ ಸಹಕಾರ ಸಪ್ತಾಹ ಉದ್ಘಾಟನೆ ನೆರವೇರಿಸಿದ್ದಾರೆ. ಮೂರನೇ ದಿನದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ […]

ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಕೇಸ್: ಉದ್ಯಮಿ ಅರವಿಂದ್ ರೆಡ್ಡಿಗೆ ಜಾಮೀನು

ಬೆಂಗಳೂರು: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರವಿಂದ್ ವೆಂಕಟೇಶ್ ರೆಡ್ಡಿಗೆ 46 ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರೋಪಿ ವಿರುದ್ಧ ಆರ್‌ಆರ್ ನಗರ (RR Nagar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಈ ಪ್ರಕರಣ ಗೋವಿಂದರಾಜನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿತ್ತು. ವಿಚಾರಣೆ ನಡೆಸಿದ ಪೊಲೀಸರು, ಆರೋಪಿಯನ್ನು 46 ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಜಾಮೀನು […]

ಮಂಗಳೂರಿನಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ: 6 ಮಂದಿ ಸಾವು

ಮಂಗಳೂರು: ಮಂಗಳೂರು ಜಿಲ್ಲೆಯಲ್ಲಿ ನ. 15ರ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ಅಫಘಾತಗಳಲ್ಲಿ ಒಟ್ಟು ಆರು ಮಂದಿ ಮೃತರಾಗಿದ್ದಾರೆ. ಬೆಂಗಳೂರಿನಿಂದ ಉಡುಪಿಗೆ ಹೊರಟಿದ್ದ ಇನ್ನೋವಾ ಕಾರೊಂದು ಬಂಟ್ವಾಳದ ಬಿಸಿ ರಸ್ತೆಯ ಸರ್ಕಲ್ ನಲ್ಲಿ ಅಪಘಾತಕ್ಕೀಡಾಗಿ ಅದರಲ್ಲಿದ್ದ ಮೂವರು ಸಾವನ್ನಪ್ಪಿದ್ದರೆ, ಪಣಂಬೂರು ಸಿಗ್ನಲ್ ನಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ಸಿಗ್ನಲ್ ನಲ್ಲಿ ನಿಂತಿದ್ದ ವಾಹನೆಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಬಂಟ್ವಾಳದಲ್ಲಿ ನಡೆದ ಅಪಘಾತಬೆಂಗಳೂರಿನಿಂದ ಉಡುಪಿಗೆ ಶ್ರೀಕೃಷ್ಣನ ದರ್ಶನಕ್ಕೆ ಹೊರಟಿದ್ದ ಇನ್ನೋವಾ ಕಾರು, ಮಂಗಳೂರಿನ […]