Flash News

ಮಡಿಕೇರಿ: ತಪಾಸಣೆ ವೇಳೆ ಕಾರಿನಲ್ಲಿ ಮಹಿಳೆಯ ಮೃತದೇಹ ಪತ್ತೆ, ಮೂವರು ವಶಕ್ಕೆ

ಮಡಿಕೇರಿ: ಚೆಕ್‌ಪೋಸ್ಟ್ ವೊಂದರಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದ ಸಂದರ್ಭ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣ ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಲಿಂಗಾಪುರ ಚೆಕ್‌ಪೋಸ್ಟ್ ನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದ ಹರಿಯಾಣ ಮೂಲದ ನಾನ್ಕಿದೇವಿ (47) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಮೂವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ರಾತ್ರಿ ಲಿಂಗಾಪುರ ಚೆಕ್‌ಪೋಸ್ಟ್ ನಲ್ಲಿ ತಪಾಸಣೆಯಲ್ಲಿ […]

Mangalore | ಸಿಗ್ನಲ್ ನಲ್ಲಿ ನಿಂತಿದ್ದ ಆಟೊ ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ; ಮೂವರು ಮೃತ್ಯು

ಪಣಂಬೂರು: ಸರಣಿ ಅಪಘಾತ ನಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ‌ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ. ಈ […]

ದಾವೂದ್ ಇಬ್ರಾಹಿಂ ಜೊತೆ ಸಂಬಂಧ: ಬಾಲಿವುಡ್ ನಟಿ ಶ್ರದ್ಧಾ ಕಪೂರ್, ನೋರಾ ಫತೇಹಿ ಸೇರಿ ಹಲವರ ಹೆಸರು ಬಹಿರಂಗ

ಬಾಲಿವುಡ್ ಸುಂದರಿಯರಾದ ಶ್ರದ್ಧಾ ಕಪೂರ್ ಮತ್ತು ನೋರಾ ಫತೇಹಿ ಅವರನ್ನು 252 ಕೋಟಿ ರೂಪಾಯಿಗಳ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಹೆಸರು ಕೇಳಿಬಂದಿದೆ. ಇದು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಬಂಧ ಹೊಂದಿದೆ. ಶ್ರದ್ಧಾ ಕಪೂರ್ ಅವರ ಸಹೋದರ ಸಿದ್ಧಾಂತ್ ಕಪೂರ್ ಅವರನ್ನೂ ಮಾದಕವಸ್ತು ತನಿಖೆಯಲ್ಲಿ ಹೆಸರಿಸಲಾಗಿದೆ. ಇತರ ಸೆಲೆಬ್ರಿಟಿಗಳು ಓರ್ರಿ, ಅಬ್ಬಾಸ್ ಮಸ್ತಾನ್, ಜೀಶನ್ ಸಿದ್ದಿಕಿ. ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಪ್ರಮುಖನಾಗಿರುವ ಮೊಹಮ್ಮದ್ ಸಲೀಂ ದುಬೈ ಮತ್ತು ಮುಂಬೈನಲ್ಲಿ ಪಾರ್ಟಿಗಳನ್ನು ಆಯೋಜಿಸಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ […]

ಬೀದಿ ನಾಯಿಗಳ ದಾಳಿಗೆ ಮಂಗಳೂರಿನಲ್ಲಿ ವ್ಯಕ್ತಿ ಬಲಿ: ಸುಶಿಕ್ಷಿತರ ನಾಡಿನಲ್ಲಿ ತಲೆತಗ್ಗಿಸುವ ಘಟನೆ..!

ಮಂಗಳೂರು: ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ದುಂರತ ಸಾವಿಗೀಡಾದ ಘಟನೆ ನಡೆದಿದೆ. ಬೆಂಗಳೂರು ಸೇರಿ ದೇಶದ ಹಲವು ಕಡೆಗಳಲ್ಲಿ ಮಕ್ಕಳನ್ನು ಗುರಿಯಾಗಿಸಿ ಬೀದಿ ನಾಯಿಗಳು ದಾಳಿ ನಡೆಸಿದ್ದನ್ನು ಕೇಳಿದ್ದೇವೆ. ಕೆಲವು ಕಡೆ ಮಕ್ಕಳು ಸಾವು ಕಂಡಿದ್ದ ಸುದ್ದಿಯನ್ನೂ ನೋಡಿದ್ದೇವೆ. ಆದರೆ ಸುಶಿಕ್ಷಿತರ ನಾಡು ಎಂದೆನಿಸಿರುವ ಮಂಗಳೂರಿನಲ್ಲಿ ಕುಡಿತದ ಚಟವಿದ್ದ ವ್ಯಕ್ತಿಯೊಬ್ಬ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ದುರಂತ ಸಾವು ಕಂಡಿದ್ದಾನೆ. ಸಾಮಾನ್ಯವಾಗಿ ಬೀದಿ ನಾಯಿಗಳು ಒಬ್ಬಂಟಿ ಮಕ್ಕಳು ಸಿಕ್ಕರೆ ದಾಳಿ ಮಾಡುವುದಿರುತ್ತದೆ. ಆದರೆ ದೊಡ್ಡವರ […]

ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಗುರುತು ಪತ್ತೆ, ಅವೈಜ್ಞಾನಿಕ ಸರ್ಕಲ್ ಅಪಘಾತಕ್ಕೆ ಕಾರಣ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಸಿರೋಡಿನ ಸರ್ಕಲ್ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ರಮ್ಯ(23), ರವಿ‌(64), ನಂಜಮ್ಮ(75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ […]

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎನ್ನುವ ತಪ್ಪು ಮಾಹಿತಿಯ ಆದೇಶ ಹರಿದಾಡುತ್ತಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ನಿಧನ ಆದೇಶವನ್ನು ತಿರುಚಲಾಗಿದ್ದು, ಹರಿದಾಡುತ್ತಿರುವ ಆದೇಶಕ್ಕೆ ಸಹಿ ಮಾಡಿರುವ ಅಧಿಕಾರಿ ಸದ್ಯ ಆ ಇಲಾಖೆಯಲ್ಲಿ ಅವರು ಸೇವೆ ಸಲ್ಲಿಸುತ್ತಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. “ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ […]

ಬಿಹಾರ: ಮುಸ್ಲಿಮರು ಹೆಚ್ಚಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು!

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಮುಸ್ಲಿಮರೇ ಹೆಚ್ಚಿರುವ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಒಟ್ಟು 36 ಕ್ಷೇತ್ರಗಳಲ್ಲಿ ಮುಸ್ಲಿಮರು ನಿರ್ಣಾಯಕರಾಗಿದ್ದಾರೆ. ಮಧ್ಯಾಹ್ನ 3:30ರ ಟ್ರೆಂಡ್‌ ಪ್ರಕಾರ ಎನ್‌ಡಿಎ 25 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಬಿಜೆಪಿ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆರ್‌ಜೆಡಿ ಕೇವಲ 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರು ಮತವನ್ನು ಚಲಾವಣೆ ಮಾಡಿದ್ದರು. ಹೀಗಾಗಿ ಮುಸ್ಲಿಮ್‌ ಮಹಿಳೆಯರು ಎನ್‌ಡಿಎ ಮತ ಹಾಕಿರುವ ಸಾಧ್ಯತೆಯಿದೆ. ಓವೈಸಿ ಅವರು […]

ಮಕ್ಕಳು ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ – ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ […]

NDA ಕ್ಲೀನ್ ಸ್ವೀಪ್: ಮಹಾಘಟಬಂಧನ್‌ ಸೋಲಿಗೆ ಕಾರಣಗಳು ಇಲ್ಲಿದೆ

ಇಲ್ಲಿನ ವಿಧಾನಸಭೆ ಚುನಾವಣೆಯಲ್ಲಿ ಎನ್​ಡಿಎ ಪ್ರಚಂಡ ಗೆಲುವಿನತ್ತ ಮುನ್ನುಗ್ಗುತ್ತಿದೆ. ಸದ್ಯದ ಟ್ರೆಂಡ್ ಪ್ರಕಾರ ಎನ್​ಡಿಎ 197 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತ್ತ ಮಹಾಘಟಬಂಧನ್‌ಗೆ ಭಾರೀ ಹಿನ್ನಡೆಯಾಗಿದ್ದು, ಕೇವಲ 40 ಕ್ಷೇತ್ರಗಳಿ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್‌ ಕೂಟವು ಮತದಾನಕ್ಕೆ ಮೊದಲೇ ತೇಜಸ್ವಿ ಯಾದವ್‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಅಲ್ಲದೆ ಉದ್ಯೋಗ ಖಾತರಿ ಸೇರಿ ತಮ್ಮ ಪ್ರಣಾಳಿಕೆಯಲ್ಲಿ ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಆದರೆ ಇದು ಯಾವುದೂ ಕೈಹಿಡಿಯಲಿಲ್ಲ. ತೇಜಸ್ವಿ ಯಾದವ್‌ ನಾಯಕತ್ವದ ಆರ್‌ಜೆಡಿ ಹಿನ್ನಡೆಗೆ […]

ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.