ಸುರತ್ಕಲ್–ಬಿ.ಸಿ.ರೋಡ್ ಹೆದ್ದಾರಿ ಎನ್‌ಎಚ್‌ಎಐಗೆ: ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ಸುರತ್ಕಲ್–ಮಂಗಳೂರು– ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯು ಪ್ರಸ್ತುತ ನವಮಂಗಳೂರು ಬಂದರು ರಸ್ತೆ ಕಂಪನಿ ಅಧೀನದಲ್ಲಿದ್ದು, ಇದರ ನಿರ್ವಹಣೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅನುದಾನ ಒದಗಿಸುತ್ತಿಲ್ಲ. ಈ ಹೆದ್ದಾರಿ ಶೀಘ್ರವೇ ಎನ್‌ಎಚ್‌ಎಐಗೆ ಹಸ್ತಾಂತರವಾಗಲಿದ್ದು, ನಿರ್ವಹಣೆ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಈ ಹೆದ್ದಾರಿಯ ಬ್ಲ್ಯಾಕ್ ಸ್ಪಾಟ್‌ಗಳನ್ನು ಸರಿಪಡಿಸಿ ಚತುಷ್ಫಥವನ್ನಾಗಿ […]
ಉಳ್ಳಾಲ ದರ್ಗಾ ಕಮಿಟಿಯಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ಬಿಜಿ ಹನೀಫ್ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಸದಸ್ಯರ ಆಗ್ರಹ

ಮಂಗಳೂರು: ಉಳ್ಳಾಲದ ಸಯ್ಯದ್ ಮದನಿ ದರ್ಗಾದಲ್ಲಿ ಮತ್ತೆ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಎರಡು ವರ್ಷಗಳ ಹಿಂದೆ ಆಡಳಿತಕ್ಕೆ ಬಂದು ಅಧ್ಯಕ್ಷರಾಗಿರುವ ಬಿ.ಜಿ ಹನೀಫ್ ಹಾಜಿ ಮತ್ತು ಪದಾಧಿಕಾರಿಗಳು ಸ್ವಜನ ಪಕ್ಷಪಾತ ಮತ್ತು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಇದರ ಬಗ್ಗೆ ವಕ್ಫ್ ಇಲಾಖೆಗೆ ದೂರಿತ್ತರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದರ್ಗಾ ಕಮಿಟಿಯ ಸದಸ್ಯರೇ ದೂರಿದ್ದಾರೆ. ಸುದ್ದಿಗೋಷ್ಟಿ ನಡೆಸಿದ ಅವರು, ವಕ್ಫ್ ಇಲಾಖೆಗೆ ಸೇರಿದ ಉಳ್ಳಾಲದ ಸಯ್ಯದ್ ಮದನಿ ದರ್ಗಾ ಮತ್ತು ಜುಮಾ ಮಸೀದಿಯ ಆಡಳಿತದಲ್ಲಿ ಭಾರೀ ಅವ್ಯವಹಾರ ಆಗುತ್ತಿದ್ದು, […]
ಮಂಗಳೂರು | ದೆಹಲಿ ಸ್ಫೋಟ ಬೆನ್ನಲ್ಲೆ ದ.ಕ ಪೊಲೀಸರು ಅಲರ್ಟ್: ಆಯಕಟ್ಟಿನ ಜಾಗಗಳಲ್ಲಿ ತಪಾಸಣೆ, ಪ್ರವಾಸಿ ತಾಣಗಳಲ್ಲಿ ಬಿಗು ಭದ್ರತೆ

ಮಂಗಳೂರು: ರಾಜಧಾನಿ ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಹೆಚ್ಚುವರಿ ತಪಾಸಣೆಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಂತೆ, ಜಿಲ್ಲೆಯಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಇಲಾಖೆಯಿಂದ ಸ್ಪಷ್ಟ ಸೂಚನೆ ನೀಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು picketing point ಕರ್ತವ್ಯದಲ್ಲಿ ವಹಿಸಲಾಗುತ್ತದೆ. ನಿಯೋಜಿಸಲಾಗಿದೆ. ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ ಸರ್ಕಾರಿ […]
ಮಂಗಳೂರು, ಪುತ್ತೂರಿನಲ್ಲಿ ವಾಹನ ಖರೀದಿಯಲ್ಲಿ ಭರ್ಜರಿ ಹೆಚ್ಚಳ: ಕಾರಣ ಏನು ಗೊತ್ತಾ?

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಾಹನ ಖರೀದಿಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ದಸರಾದಿಂದ ಆರಂಭಗೊಂಡ ವಾಹನ ಮಾರಾಟ ದೀಪಾವಳಿಯ ಸಮಯದಲ್ಲಿ ಗರಿಷ್ಠ ಮಟ್ಟವನ್ನು ತಲುಪಿದ್ದು, ಈಗಲೂ ಖರೀದಿ ಮುಂದುವರಿಸಿದೆ. ಜಿಎಸ್‌ಟಿ ದರಗಳಲ್ಲಿನ ಕಡಿತ ಮತ್ತು ಹಬ್ಬದ ಆಕರ್ಷಕ ಕೊಡುಗೆಗಳು ಗ್ರಾಹಕರನ್ನು ಶೋರೂಂಗಳತ್ತ ಆಕರ್ಷಿಸಿವೆ. ಹೊಸ ವರ್ಷದವರೆಗೂ ವಾಹನ ಖರೀದಿ ಮುಂದುವರಿಯುವ ನಿರೀಕ್ಷೆ ಹೊಂದಿದೆ. ಮಂಗಳೂರು, ಉಡುಪಿ, ಪುತ್ತೂರು ಮತ್ತು ಬಂಟ್ವಾಳ ಪ್ರದೇಶಗಳಲ್ಲಿ ಖರೀದಿಸಿದ ವಾಹನಗಳನ್ನು ನೋಂದಾಯಿಸಲಾಗಿದೆ. ಆದರೆ ಹಲವಾರು ನೋಂದಣಿಗಳು ಇನ್ನೂ ಪ್ರಕ್ರಿಯೆಯಲ್ಲಿವೆ. ಡೀಲರ್‌ಶಿಪ್‌ಗಳ […]
Exit Polls: ಬಿಹಾರದಲ್ಲಿ ಯಾರಿಗೆ ಬಹುಮತ: ಯಾವ ಸಮೀಕ್ಷೆ ಏನು ಹೇಳುತ್ತೆ?

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ 2ನೇ ಹಂತದ ಮತದಾನ ಇಂದು ಮುಕ್ತಾಯವಾಗಿದ್ದು, ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದೆ. ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿವೆ. ರಾಜ್ಯದಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿದೆ. ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಬಣವು ಎನ್‌ಡಿಎಗಿಂತ ಹಿಂದುಳಿದಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಯಾವ ಸಮೀಕ್ಷೆ ಏನು ಹೇಳುತ್ತೆ? ಪೀಪಲ್ಸ್ ಪಲ್ಸ್ಎನ್‌ಡಿಎ 133-159 ಸ್ಥಾನಮಹಾಘಟಬಂಧನ್ 75-101 ಪೀಪಲ್ಸ್ ಇನ್‌ಸೈಟ್‌ಬಿಜೆಪಿ 68-72ಜೆಡಿ(ಯು) 55-60ಆರ್‌ಜೆಡಿ […]
ಸಮುದಾಯದ ಪರ ನಿಂತಿದ್ದಕ್ಕೆ ಪಕ್ಷದಲ್ಲಿ ಕಡೆಗಣಿಸುವ ಪ್ರಯತ್ನಗಳು ನಡೆಯುತ್ತಿದೆ: ಕಾಂಗ್ರೆಸ್ ಮುಸ್ಲಿಂ ಮುಖಂಡರ ಸಭೆಯಲ್ಲಿ ಆಕ್ರೋಶ

ಮಂಗಳೂರು: ಸಮುದಾಯದ ಪರ ನಿಲ್ಲುವ ಮುಸ್ಲಿಂ ಮುಖಂಡರನ್ನು ಭಿನ್ನಮತೀಯರು ಅಂತ ಹಣೆಪಟ್ಟಿ ಕಟ್ಟುತ್ತಿದ್ದಾರೆ ಎಂದು ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಭೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದ.ಕ ಜಿಲ್ಲೆಯಲ್ಲಿ ಇತ್ತೀಚೆಗೆ ಜಾನುವಾರು ಸಾಗಾಟಕ್ಕೆ ಸಂಬಂಧಿಸಿ ನಡೆದಿರುವ ಅನಪೇಕ್ಷಿತ ಘಟನೆಗಳಿಗೆ ಸಂಬಂಧಿಸಿ ನಗರದ ಕಾಂಗ್ರೆಸ್ ಭವನದಲ್ಲಿ ಅಲ್ಪಸಂಖ್ಯಾತ ಘಟಕದ ನಾಯಕರು ಮತ್ತು ಮುಸ್ಲಿಂ ಮುಖಂಡರು ಕೆ.ಕೆ ಶಾಹುಲ್ ಹಮೀದ್ ನೇತೃತ್ವದಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಮತ್ತು ಅಲ್ಪಸಂಖ್ಯಾತ ಘಟಕದ ಪ್ರಮುಖರು […]
ಇಸ್ಲಾಮಾಬಾದ್ ಕೋರ್ಟ್ ಕಾಂಪ್ಲೆಕ್ಸ್‌ನಲ್ಲಿ ಕಾರು ಬಾಂಬ್ ಸ್ಫೋಟ; 12 ಮಂದಿ ಸಾವು

ಇಸ್ಲಾಮಾಬಾದ್: ಇಲ್ಲಿನ ಕೋರ್ಟ್ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. 27 ಮಂದಿ ಗಾಯಗೊಂಡಿದ್ದಾರೆ. ಇದು ಆತ್ಮಾಹುತಿ ದಾಳಿ ಎಂದು ವರದಿಯಾಗಿದೆ. ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಅವರು, ಆತ್ಮಾಹುತಿ ಬಾಂಬ್ ದಾಳಿ ಮಧ್ಯಾಹ್ನ 12:39 ಕ್ಕೆ ನಡೆದಿದೆ. ಬಾಂಬರ್ ನ್ಯಾಯಾಲಯ ಸಂಕೀರ್ಣ ಪ್ರವೇಶಿಸಲು ಪ್ರಯತ್ನಿಸಿದ್ದ. ಆದರೆ, 10 ರಿಂದ 15 ನಿಮಿಷಗಳ ಕಾಲ ಅಲ್ಲಿಯೇ ಕಾದ ನಂತರ ಹೊರಗೆ, ಪೊಲೀಸ್ ವಾಹನದ ಬಳಿ ಸಾಧನವನ್ನು ಸ್ಫೋಟಿಸಿದ್ದಾನೆಂದು ತಿಳಿಸಿದ್ದಾರೆ. ಅದು ಕಾರ್ ಬಾಂಬ್ ಎಂದು […]
ದೆಹಲಿ ಸ್ಫೋಟಕ್ಕೆ ಛಿದ್ರಗೊಂಡ ಕುಟುಂಬಗಳ ಕನಸು: ಮೃತಪಟ್ಟ ಅನ್ಸಾರಿ, ಮೌಸಿನ್ ಅಶೋಕ್ ಮನೆಯ ಕಣ್ಣೀರ ಕತೆ

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಬಳಿ ನಡೆದ ಸ್ಫೋಟದಿಂದ ದೇಶವೇ ಬೆಚ್ಚಿಬಿದ್ದಿದೆ. ಸ್ಫೋಟದಲ್ಲಿ 12 ಜನ ಸಾವನ್ನಪ್ಪಿದ್ದು, ಕುಟುಂಬದ ಸದಸ್ಯರನ್ನು ಕಳೆದುಕೊಂಡ ಕುಟುಂಬಸ್ಥರ ಕನಸು ಛಿದ್ರವಾಗಿದೆ. ಬಿಹಾರದ ಪಂಕಜ್ ಸೈನಿ (22), ಕ್ಯಾಬ್ ಚಾಲಕನಾಗಿದ್ದು, ಚಾಂದನಿ ಚೌಕ್‌ನಲ್ಲಿ ಒಬ್ಬ ಪ್ರಯಾಣಿಕನನ್ನು ಇಳಿಸಿದ್ದ. ಉತ್ತರ ಪ್ರದೇಶದ ಶಾಮ್ಲಿಯ ನೋಮನ್ ಅನ್ಸಾರಿ ತನ್ನ ಸೌಂದರ್ಯವರ್ಧಕ ಅಂಗಡಿಗೆ ಸಾಮಗ್ರಿಗಳನ್ನು ತೆಗೆದುಕೊಳ್ಳಲು ಅಲ್ಲಿಗೆ ಬಂದಿದ್ದ. ಮತ್ತೊಬ್ಬ ದೆಹಲಿ ಸಾರಿಗೆ ನಿಗಮದಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಅಶೋಕ್ ಕುಮಾರ್, ಘಟನೆಯಲ್ಲಿ ವ್ಯಕ್ತಿಯೊಬ್ಬನನ್ನು […]
ದೆಹಲಿ ಸ್ಪೋಟ | ‘ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ದೊಡ್ಡ ಪಾಪ; ಆರೋಪಿಗಳು ಮುಸ್ಲಿಮರಾಗಲು ಸಾಧ್ಯವಿಲ್ಲ’: ಶಿಯಾ ಧರ್ಮಗುರು

ಲಕ್ನೋ: ಸೋಮವಾರ ಸಂಜೆ ದೆಹಲಿಯಲ್ಲಿ ಸಂಭವಿಸಿದ ಮಾರಣಾಂತಿಕ ಸ್ಫೋಟದಲ್ಲಿ 12 ಜನರು ಸಾವಿಗೀಡಾಗಿದ್ದು, ಶಿಯಾ ಧರ್ಮಗುರು ಮೌಲಾನಾ ಸೈಯದ್ ಕಲ್ಬೆ ಜವಾದ್, ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ‘ಅತಿದೊಡ್ಡ ಪಾಪ’ ಎಂದು ಮಂಗಳವಾರ ಹೇಳಿದ್ದಾರೆ. ದೆಹಲಿ ಸ್ಫೋಟದಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂದು ಆರೋಪಿಸಿದ ಅವರು, ನೆರೆಯ ದೇಶವನ್ನು ಸಂಪೂರ್ಣವಾಗಿ ಬಹಿಷ್ಕರಿಸಬೇಕೆಂದು ಅವರು ಕರೆ ನೀಡಿದರು. ANI ಜೊತೆ ಮಾತನಾಡಿದ ಅವರು, ‘ಇಸ್ಲಾಂನಲ್ಲಿ ಇದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಮಾಯಕನನ್ನು ಕೊಲ್ಲುವುದು ಅತ್ಯಂತ ದೊಡ್ಡ ಪಾಪ. ದೆಹಲಿ ಸ್ಫೋಟದಲ್ಲಿ ಅಮಾಯಕರು ಕೊಲ್ಲಲ್ಪಟ್ಟರು; […]
ಅಮಿತ್ ಶಾ ಅಸಮರ್ಥ ಗೃಹ ಸಚಿವ: ಪ್ರಿಯಾಂಕ್ ಖರ್ಗೆ ಕಿಡಿ!

ಬೆಂಗಳೂರು: ನಿನ್ನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ದೆಹಲಿ ಸ್ಫೋಟದ ಘಟನೆಯ ನಂತರ ರಾಜಕೀಯದ ಕಾವು ಹೆಚ್ಚಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ ತಮ್ಮ ಹೇಳಿಕೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, “ಅಸಮರ್ಥ ಗೃಹ ಸಚಿವರೂ ಯಾರಾದರೂ ಇದ್ದರೆ, ಅದು ಅಮಿತ್ ಶಾ. ದೆಹಲಿ, ಮಣಿಪುರ್, ಪೆಹಲ್ಗಾಮ್ ಎಲ್ಲ ಕಡೆ ಭದ್ರತಾ ವೈಫಲ್ಯ, […]