Flash News

ಅಮಿತ್ ಶಾ ಅಸಮರ್ಥ ಗೃಹ ಸಚಿವ: ಪ್ರಿಯಾಂಕ್ ಖರ್ಗೆ ಕಿಡಿ!

ಬೆಂಗಳೂರು: ನಿನ್ನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ದೆಹಲಿ ಸ್ಫೋಟದ ಘಟನೆಯ ನಂತರ ರಾಜಕೀಯದ ಕಾವು ಹೆಚ್ಚಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ ತಮ್ಮ ಹೇಳಿಕೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, “ಅಸಮರ್ಥ ಗೃಹ ಸಚಿವರೂ ಯಾರಾದರೂ ಇದ್ದರೆ, ಅದು ಅಮಿತ್ ಶಾ. ದೆಹಲಿ, ಮಣಿಪುರ್, ಪೆಹಲ್ಗಾಮ್ ಎಲ್ಲ ಕಡೆ ಭದ್ರತಾ ವೈಫಲ್ಯ, […]

ದೆಹಲಿ ಸ್ಫೋಟ: i20 ಕಾರಿನ ಬಗ್ಗೆ ಶಾಕಿಂಗ್ ಮಾಹಿತಿ ಬಯಲು

ನವದೆಹಲಿ: ರಾಷ್ಟ್ರರಾಜಧಾನಿ ನವದೆಹಲಿ ಕೆಂಪು ಕೋಟೆ ಬಳಿ ಐ20 ಕಾರು ಸ್ಫೋಟಗೊಂಡಿದ್ದು, ಘಟನೆಯಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಯಾಗಿದೆ. ಇನ್ನು ಯಾವ ಕಾರಣಕ್ಕೆ ಸ್ಫೋಟ ಸಂಭವಿಸಿತು? ಕಾರಿನ ಹಿಂದುಗಡೆ ಅಳವಡಿಸಿದ್ದ ಸಿಎನ್‌ಜಿಯಿಂದ ಸ್ಫೋಟ ಸಂಭವಿಸಿತ್ತಾ? ಹೀಗೆ ನಾನಾ ರೀತಿಯ ವರದಿಗಳು ಆರಂಭದಲ್ಲಿ ಪ್ರಕಟವಾಗಿದ್ದವು. ಆದರೆ ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಯಾವ ಕಾರಿನಿಂದ ಈ ಕೃತ್ಯ ಸಂಭವಿಸಿದೆ ಎನ್ನುವುದನ್ನು ಪೊಲೀಸರು ನಿಖರವಾಗಿ ಪತ್ತೆ ಹೆಚ್ಚಿದ್ದಾರೆ. ಸ್ಫೋಟ ನಡೆದ ಬೆನ್ನಲ್ಲೇ ಅಲರ್ಟ್‌ ಆದ ಪೊಲೀಸರು ಮೊದಲು ರಸ್ತೆಯಲ್ಲಿರುವ 100ಕ್ಕೂ […]

ಮಂಗಳೂರಿನ ಹುಡುಗಿ ಮಹಾನಟಿ ವಿನ್ನರ್: ಗೆಲುವಿನ ಮುಂಚೇನೆ ಸಿಕ್ತು ಸಿನಿಮಾ ಚಾನ್ಸ್!

ಮಂಗಳೂರಿನ ವಂಶಿ ಈ ಸಲದ ಮಹಾನಟಿ ವಿನ್ನರ್ ಆಗಿದ್ದಾರೆ. ಫಸ್ಟ್ ರನ್ನರ್‌ ಅಪ್‌ ಬೆಳಗಾವಿಯ ವರ್ಷಾ ಡಿಗ್ರಜೆ ಆಗಿದ್ದಾರೆ. ಮಹಾನಟಿ ಸೀಸನ್ ಎರಡರ ವಿನ್ನರ್ ಆದ ವಂಶಿ ಪ್ರತಿಭಾವಂತ ನಟಿನೇ ಆಗಿದ್ದಾರೆ. ನಟಿ ಆಗ್ಬೇಕು ಅಂತ ಬಂದು ಈ ಗೆಲುವಿನ ಮೂಲಕ ಮೊದಲ ಹೆಜ್ಜೆ ಇಟ್ಟಿದ್ದೇನೆ ಅಂತ ತಮ್ಮ ವಿನ್ನಿಂಗ್ ಸ್ಪೀಚ್ ಅಲ್ಲೂ ಹೇಳಿಕೊಂಡಿದ್ದಾರೆ. ಬಿ.ಸರೋಜಾ ದೇವಿ ಅವರನ್ನೂ ಈ ಸಮಯದಲ್ಲಿ ನೆನಪಿಸಿಕೊಂಡಿದ್ದಾರೆ. ಇವರ ಮಾತು ಮತ್ತು ವಿನ್ನರ್ ವಂಶಿ ಬಗೆಗಿನ ಇನ್ನಷ್ಟು ವಿವರ ಇಲ್ಲಿದೆ ಓದಿ. […]

ದೆಹಲಿ ಸ್ಫೋಟ: ಪ್ರಧಾನಿ ಮೋದಿ ಫಸ್ಟ್ ರಿಯಾಕ್ಷನ್

ಥಿಂಪು: ‘ದೆಹಲಿ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಬಾಂಬ್ ಸ್ಫೋಟ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ನಮ್ಮ ತನಿಖಾ ಸಂಸ್ಥೆಗಳು ಈ ಪ್ರಕರಣದ ಆಳಕ್ಕಿಳಿದು, ಇದರ ಹಿಂದಿರುವವರನ್ನು ಪತ್ತೆ ಮಾಡಲಿವೆ’ ಎಂದಿದ್ದಾರೆ. ಭೂತಾನ್ ಪ್ರವಾಸದಲ್ಲಿರುವ ಅವರು ಘಟನೆ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ‘ದೆಹಲಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಘಟನೆ ಪ್ರತಿಯೊಬ್ಬರಿಗೂ ಆಘಾತವನ್ನುಂಟು ಮಾಡಿದೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರನ್ನೂ ಕಾನೂನು ಎದುರು ನಿಲ್ಲಿಸಲಾಗುವುದು’ ಎಂದಿದ್ದಾರೆ. ‘ಸ್ಫೋಟದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರ ಕುಟುಂಬದವರೊಂದಿಗೆ ಇಡೀ […]

RSS ಬೆಳೆಯಲು ಕಾಂಗ್ರೆಸ್‌ ಕಾರ್ಯಕರ್ತರೆ ಕಾರಣ : ದಲಿತ ಸಂಘರ್ಷ ಸಮಿತಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಇಂದು ಆರ್‌ಎಸ್‌ಎಸ್‌ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ದಸಂಸ ಅಂಬೇಡ್ಕರ್ ಉಡುಪಿ ಜಿಲ್ಲಾ ಸಂಚಾಲಕ ಅಡ್ವಕೇಟ್‌ ಮಂಜುನಾಥ್‌ ಗಿಳಿಯಾರ್‌, ದೇಶದಲ್ಲಿ ಆರ್‌ಎಸ್‌ಎಸ್‌ ಬೆಳೆಯಲು ಕಾರಣವೇ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು. ಕಾಂಗ್ರೆಸ್‌ ಆಡಳಿತದಲ್ಲಿದ್ದರೂ ಆರ್‌ಎಸ್‌ಎಸ್‌ ನಿಷೇಧಿಸಲು ಸಾಧ್ಯವಾಗಲಿಲ್ಲ. ಇದರ ಹೊಣೆಗಾರರು ಸ್ವತಃ ಕಾಂಗ್ರೆಸ್‌ ನಾಯಕರೇ ಎಂದು ಹೇಳಿದರು. ಆರ್‌ಎಸ್‌ಎಸ್‌ ಸಮಾನತೆಯ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಮೀಸಲಾತಿ […]

ಧರ್ಮೇಂದ್ರ ಸಾವಿನ ಸುದ್ದಿ ಸುಳ್ಳು : ಹೇಮಾಮಾಲಿನಿ ಆಕ್ರೋಶ

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಕೆಲವು ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಧರ್ಮೇಂದ್ರ ನಿಧನದ ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ ಧರ್ಮೇಂದ್ರ ಪತ್ನಿ ನಟಿ, ಸಂಸದೆ ಹೇಮಾಮಾಲಿನಿ ಟ್ವೀಟ್ ಮಾಡಿ ಬೇಸರ ಹೊರಹಾಕಿದ್ದಾರೆ. ನಟ ಧರ್ಮೇಂದ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿರುವ ಧರ್ಮೇಂದ್ರ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಆದರೆ ಕೆಲ ಮಾಧ್ಯಮಗಳು ಧರ್ಮೇಂದ್ರ ನಿಧನ ಹೊಂದಿದ್ದಾರೆ ಎಂದು […]

1997 ರಿಂದ ಕೆಂಪು ಕೋಟೆ ಬಳಿ 3ನೇ ಸ್ಫೋಟ; ದೆಹಲಿಯಲ್ಲಿ ಸ್ಫೋಟಗಳ ಇತಿಹಾಸ

ನವದೆಹಲಿ: ದೇಶಾದ್ಯಂತ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಸಂಚು ರೂಪಿಸಿದ್ದ ಹೊತ್ತಲ್ಲೇ ರಾಷ್ಟ್ರರಾಜಧಾನಿಯ ಹೃದಯಭಾಗ ಕೆಂಪು ಕೋಟೆ ಬಳಿ ಭೀಕರ ಸ್ಫೋಟ ಸಂಭವಿಸಿದೆ. ಸೋಮವಾರ ಸಂಜೆ 6:45 ರಿಂದ 7 ಗಂಟೆ ಅವಧಿಯಲ್ಲಿ ಸ್ಫೋಟ ಸಂಭವಿಸಿದ್ದು, ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆಗೆ ದೇಹಗಳು ಛಿದ್ರ ಛಿದ್ರವಾಗಿದೆ. ಇತಿಹಾಸವನ್ನೊಮ್ಮೆ ನೋಡಿದಾಗ ದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿರೋದು ಇದೇ ಮೊದಲೇನಲ್ಲ. 1997ರ ಬಳಿಕ ಕೆಂಪು ಕೋಟೆ ಬಳಿ 3ನೇ ಬಾರಿಗೆ ಸ್ಫೋಟ ಸಂಭವಿಸಿದ್ರೆ 1996ರಿಂದ ಈವರೆಗೆ ವಿವಿಧೆಡೆ 16 […]

ಕೆಂಪು ಕೋಟೆ ಬಳಿ ಕಾರು ಸ್ಫೋಟ: ಓರ್ವ ಶಂಕಿತ ಪೊಲೀಸ್ ವಶಕ್ಕೆ

ನವದೆಹಲಿ: ರಾಷ್ಟ್ರರಾಜಧಾನಿಯ ಹೃದಯಭಾಗದಲ್ಲಿಂದು ಕೆಂಪು ಕೋಟೆ ಬಳಿ ಸಂಭವಿಸಿದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿ ವಿಶೇಷ ಘಟಕ ಅಧಿಕಾರಿಗಳ ತಂಡ ಓರ್ವ ಶಂಕಿತನ್ನ ವಶಕ್ಕೆ ಪಡೆದಿದೆ. ವಿಚಾರಣೆ ಬಳಿಕವೇ ಸ್ಪೋಟಕ ರಹಸ್ಯ ಹೊರಬೀಳಬೇಕಿದೆ. ಕೆಂಪು ಕೋಟೆ ಸಮೀಪದ ಲಾಲ್‌ ಕಿಲಾ ಮೆಟ್ರೋ ನಿಲ್ದಾಣ ಗೇಟ್ ಸಂಖ್ಯೆ-1ರ ಬಳಿ ಸೋಮವಾರ ಸಂಜೆ 6:45 ರಿಂದ 7 ಗಂಟೆ ಅವಧಿಯಲ್ಲಿ ಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ ಈವರೆಗೆ 10ಕ್ಕೆ ಏರಿಕೆಯಾಗಿದ್ದು, 30ಕ್ಕೂ […]

ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಸಾವು, ಹಲವರಿಗೆ ಗಾಯ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸ್ಫೋಟ ಸಂಭವಿಸಿದೆ. ಕೆಂಪು ಕೋಟೆ ಚಾಂದಿನಿ ಚೌಕ್ ಬಳಿಯ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟಗೊಂಡಿದೆ. 8 ಮಂದಿ ಸಾವನ್ನಪ್ಪಿದ್ದಾರೆ‌. ಸ್ಫೋಟದ ರಭಸಕ್ಕೆ ಎರಡು ಕಾರುಗಳು ಭಸ್ಮವಾಗಿದೆ. ಇತರ ಮೂರು ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದೆ. ಪಾರ್ಕ್ ಮಾಡಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಭಯೋತ್ಪಾದಕರ ಅತೀ ದೊಡ್ಡ ಸಂಚನ್ನು ಪೊಲೀಸರು ವಿಫಲಗೊಳಿಸಿದ ಬೆನ್ನಲ್ಲೇ ಈ ಸ್ಫೋಟ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಫೋಟದ ಕಾರಣ […]

ನವೆಂಬರ್ 15ರಿಂದ ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ

ಉಜಿರೆ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮ ನ.15ರಿಂದ 19ರವರೆಗೆ ನಡೆಯಲಿವೆ. 18ರಂದು ಸಂಜೆ 5ರಿಂದ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದ್ದು, ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಅಧಿವೇಶನ ಉದ್ಘಾಟಿಸುವರು. ಹರಿಹರಪುರದ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಪತ್ರಕರ್ತ ಎ.ಸೂರ್ಯಪ್ರಕಾಶ್ ಪಂಡಿತ್, ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಉಪನ್ಯಾಸ ನೀಡುವರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ 8.30ರಿಂದ ಚೆನ್ನೈನ ಶ್ರೀದೇವಿ ನೃತ್ಯಾಲಯದ ಕಲಾವಿದರಿಂದ ಭರತನಾಟ್ಯ ನೃತ್ಯ ಪ್ರದರ್ಶನವಿದೆ.ರಾತ್ರಿ […]