Flash News

ಭಾರತ ಹಿಂದೂ ರಾಷ್ಟ್ರ । ಮುಸ್ಲಿಂ ಪೂರ್ವಜರೆಲ್ಲರೂ ಹಿಂದೂಗಳೇ ; ಮೋಹನ್ ಭಾಗವತ್

ಬೆಂಗಳೂರು: ‘ಭಾರತವು ಹಿಂದೂ ರಾಷ್ಟ್ರವಾಗಿದ್ದು, ಈ ರಾಷ್ಟ್ರದ ಹೊಣೆ ಹಿಂದೂಗಳ ಮೇಲಿದೆ’ ಎಂದು ಆರ್‌ಎಸ್‌ಎಸ್‌ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದರು. ನಗರದ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಸಂಘದ 100 ವರ್ಷದ ಪಯಣ: ನವ ಕ್ಷಿತಿಜ’ ಕುರಿತು ಉಪನ್ಯಾಸದಲ್ಲಿ ಅವರು, ಸಂಘ ನಡೆದು ಬಂದ ಹಾದಿ ಮತ್ತು ಉದ್ದೇಶದ ಕುರಿತು ವಿವರಿಸಿದರು. ‘ಸಾಮರಸ್ಯ ಬಯಸುವ ನಿಟ್ಟಿನಲ್ಲಿ ಸಂಘವು ಕೆಲಸ ಮಾಡುತ್ತದೆ. ಬ್ರಿಟಿಷರು ಭಾರತಕ್ಕೆ ರಾಷ್ಟ್ರೀಯತೆ ನೀಡಿಲ್ಲ. ಪ್ರಾಚೀನ ಕಾಲದಿಂದಲೇ ಭಾರತವು ತನ್ನದೇ ರಾಷ್ಟ್ರೀಯತೆಯನ್ನು ಹೊಂದಿದೆ’ […]

PFIಯ 67 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದ ED

ಹೊಸದಿಲ್ಲಿ: ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ 67 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಲು ನ.6ರಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ ಜಾರಿ ನಿರ್ದೇಶನಾಲಯ(ಈಡಿ)ವು ಶನಿವಾರ ತಿಳಿಸಿದೆ. ಈ ಆಸ್ತಿಗಳು ಪಿಎಫ್‌ಐನ ಒಡೆತನ ಮತ್ತು ನಿಯಂತ್ರಣದಲ್ಲಿವೆ ಹಾಗೂ ಅದರ ರಾಜಕೀಯ ಘಟಕ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಮತ್ತು ವಿವಿಧ ಟ್ರಸ್ಟ್‌ಗಳ ಹೆಸರುಗಳಲ್ಲಿವೆ ಎಂದು ಈಡಿ ಹೇಳಿಕೆಯಲ್ಲಿ ತಿಳಿಸಿದೆ. ಇತ್ತೀಚಿನ ಜಪ್ತಿಯೊಂದಿಗೆ ಈಡಿ […]

ಧರ್ಮಸ್ಥಳ: ʼಗೋಹತ್ಯೆ ಕಾಯ್ದೆʼ ಬಗ್ಗೆ ಮಸೀದಿಗಳಲ್ಲಿ ಜಾಗೃತಿ ಕಾರ್ಯಕ್ರಮ ಅಸಂವಿಧಾನಿಕ; ಪೊಲೀಸರ ವಿರುದ್ಧ ಕಾನೂನು ಕ್ರಮಕ್ಕೆ ಐಜಿಪಿಗೆ ದೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಅಕ್ರಮ ದನ ಸಾಗಾಟ ಮತ್ತು ದನ ಹತ್ಯೆಯ ಕುರಿತು ಮಸೀದಿಗಳಿಗೆ ಭೇಟಿ ನೀಡಿ ʼಕರ್ನಾಟಕ ಗೋವಧೆ ತಡೆ ಮತ್ತು ದನಗಳ ಸಂರಕ್ಷಣಾ ಕಾಯ್ದೆ’ ಜಾಗೃತಿ ಎಂಬ ಕಾರ್ಯಕ್ರಮದ ಮೂಲಕ ಅಸಂವಿಧಾನಿಕ, ತಾರತಮ್ಯದ ಕೃತ್ಯವನ್ನು ಎಸಗುತ್ತಿದ್ದು, ಈ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಪಶ್ಚಿಮ ವಲಯ ಐಜಿಪಿಗೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅವರು ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಕೊಕ್ಕಡ ಮಸೀದಿಗೆ ಭೇಟಿ ನೀಡಿ […]

ಅನಿವಾಸಿ ಕನ್ನಡಿಗರಿಗೆ ಕೊಟ್ಟ ‘ಪ್ರತ್ಯೇಕ ಸಚಿವಾಲಯ’ ಗ್ಯಾರಂಟಿ ಯಾವಾಗ?: ಕರ್ನಾಟಕ ಸರಕಾರವನ್ನು ಪ್ರಶ್ನಿಸಿದ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

ದುಬೈ: ಅನಿವಾಸಿ ಕನ್ನಡಿಗರ ರಕ್ಷಣೆ, ಸಾಮಾಜಿಕ ಭದ್ರತೆ ದೃಷ್ಟಿಯಿಂದ ಕರ್ನಾಟಕ ರಾಜ್ಯ ಸರಕಾರ ಚುನಾವಣೆಯ ವೇಳೆ ಅನಿವಾಸಿ ಕನ್ನಡಿಗರಿಗಾಗಿ ಘೋಷಿಸಿದ್ದ ‘ಪ್ರತ್ಯೇಕ ಸಚಿವಾಲಯ’ ಗ್ಯಾರಂಟಿಯನ್ನು ಯಾವಾಗ ಆರಂಭಿಸುತ್ತೀರಿ ಎಂದು ರಾಜ್ಯ ಸರಕಾರವನ್ನು ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಪ್ರಶ್ನಿಸಿದ್ದಾರೆ. ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ವಿಧಾನ ಪರಿಷತ್ ಗೆ ನೂತನ ಸದಸ್ಯೆಯಾಗಿ ಆಯ್ಕೆಗೊಂಡಿರುವ ಹಿನ್ನೆಲೆಯಲ್ಲಿ ಅವರಿಗಾಗಿ KNRI ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಬಿಸಿಸಿಐ ಅಧ್ಯಕ್ಷ ಹಿದಾಯತ್ ಅಡ್ಡೂರು ಹಾಗು ಕರ್ನಾಟಕ […]

ಕಾಸರಗೋಡು: ಮುಸ್ಲಿಂ ಲೀಗ್ ನಾಯಕ ಬಿಜೆಪಿ ಸೇರ್ಪಡೆ..!

ಕಾಸರಗೋಡು : ಮುಸ್ಲಿಂ ಲೀಗ್ ಪೈವಳಿಕೆ ಪಂಚಾಯತ್ ಮಾಜಿ ಪ್ರಧಾನ ಕಾರ್ಯದರ್ಶಿ ಸಲೀಲ್ ಮಾಸ್ಟರ್ ಪೈವಳಿಕೆ ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ಬಿಜೆಪಿ ಕಾಸರಗೋಡು ಜಿಲ್ಲಾ ಮೈನಾರಿಟಿ ಮೋರ್ಚಾದ ಅಧ್ಯಕ್ಷರಾದ ಪಿ.ಎಂ. ಸುಹೈಲ್, ಮೈನಾರಿಟಿ ಮೋರ್ಚಾದ ಜಿಲ್ಲಾ ಪ್ರಭಾರಿ ಮತ್ತು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪುಷ್ಪ ಗೋಪಾಲನ್ ಅವರ ಸಮ್ಮುಖದಲ್ಲಿ, ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ ಎಂ.ಎಲ್. ಶಾಲು ಹೊದಿಸಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಯೂತ್ ಮುಸ್ಲಿಂ ಲೀಗ್‌ನ ಪ್ರಧಾನ ಕಾರ್ಯದರ್ಶಿಯಾಗಿಯೂ ಸಹ ಕಾರ್ಯ ನಿರ್ವಹಿಸಿದ್ದರು. ಸಲೀಲ್ […]

ಹಿಂದು ಪದ್ಧತಿಯಂತೆ ನೆರವೇರಿದ ನಟಿ ಜರೀನ್ ಖಾನ್ ಅವರ ಅಂತ್ಯಕ್ರಿಯೆ: ಕಾರಣವೇನು ಗೊತ್ತೇ!

ಮುಂಬೈ: ಬಾಲಿವುಡ್​ನ ಖ್ಯಾತ ನಿರ್ಮಾಪಕ ಸಂಜಯ್​ ಖಾನ್​ ಅವರ ಪತ್ನಿ ಜರೀನ್​ ಖಾನ್ ಅವರು ಇದೇ ನ.7ರಂದು ತಮ್ಮ 81ನೇ ವಯಸ್ಸಿನಲ್ಲಿ ಹೃದಯಘಾತದಿಂದ ನಿಧನರಾದರು. ಅವರ ಅಂತ್ಯಕ್ರಿಯೆಯೂ ಅಂದೇ ನಡೆಯುತು. ಆದರೆ, ಅವರ ಅಂತ್ಯಕ್ರಿಯೆ ಹಿಂದು ಸಂಪ್ರದಾಯದಂತೆ ನೇರವೇರಿಸಲಾಗಿದೆ. ಈ ಸಂಬಂಧ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಂಜಯ್ ಮತ್ತು ಜರೀನ್ ಅವರಿಗೆ ಸುಸ್ಸಾನ್ ಖಾನ್, ಜಾಯೆದ್ ಖಾನ್, ಫರಾ ಅಲಿ ಖಾನ್ ಮತ್ತು ಸಿಮೋನ್ ಖಾನ್ ಸೇರಿ ನಾಲ್ಕು ಮಕ್ಕಳಿದ್ದಾರೆ. ಈ ನಾಲ್ವರ […]

ಮಂಗಳೂರು: ಬಹು ಕೋಟಿ ವಂಚನೆ ಕೇಸ್‌ – ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸೋದಾಗಿ ಕೋಟಿ ಕೋಟಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನ 2.85 ಕೋಟಿ ರೂ. ಮೌಲ್ಯದ ಆಸ್ತಿ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ರೋಷನ್ ಸಲ್ಡಾನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತತ್ಕಾಲಿಕ ಮುಟ್ಟುಗೋಲು ಹಾಕಿದ್ದಾರೆ. ರೋಷನ್ ಸಲ್ಡಾನ ಕೋಟಿಗಟ್ಟಲೆ ಸಾಲ ಕೊಡಿಸುವ ಆಮಿಷವೊಡ್ಡಿ ದೇಶದ ಐಷಾರಾಮಿ ವ್ಯಕ್ತಿಗಳು ಹಾಗೂ ಉದ್ಯಮಿಗಳಿಗೆ 200 […]

ವಿಕೃತ ಕಾಮಿ ಉಮೇಶ್‌ ರೆಡ್ಡಿ ಜೈಲಲ್ಲಿ ಬಿಂದಾಸ್ ಲೈಫ್!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲ ಎನ್ನುವಂತಾಗಿದೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಇದ್ದ ವೇಳೆ ಸಿಕ್ಕ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಕಟುವಾಗಿ ಟೀಕಿಸಿತ್ತು. ಇದೀಗ ಮತ್ತೊಂದು ರಾಜಾತಿಥ್ಯ ಕೇಸ್‌ಗೆ ಪರಪ್ಪನ ಅಗ್ರಹಾರ ಜೈಲು ಸುದ್ದಿಯಾಗಿದೆ. ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನ ಆಗಿರುವ ನಟಿ ರನ್ಯಾ ರಾವ್‌ ಪ್ರಿಯಕರ ತರುಣ್‌ ರಾಜ್‌ ಜೈಲಿನಲ್ಲಿ ಬಿಂದಾಸ್‌ ಲೈಫ್‌ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ. […]

14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಮಹಿಳೆಗೆ 54 ವರ್ಷ ಜೈಲು ಶಿಕ್ಷೆ!

ತಮಿಳುನಾಡು: 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಿರುವರೂರು ಫಾಸ್ಟ್ ಟ್ರ್ಯಾಕ್ ಮಹಿಳಾ ನ್ಯಾಯಾಲಯವು ಶುಕ್ರವಾರ 39 ವರ್ಷದ ಮಹಿಳೆಗೆ 54 ವರ್ಷಗಳ ಜೈಲು ಶಿಕ್ಷೆ ಮತ್ತು 18,000 ರೂ. ದಂಡ ವಿಧಿಸಿದೆ. ಏನಿದು ಪ್ರಕರಣ, ಹಿನ್ನೆಲೆ ಏನು? ದೇಡಿಯೂರಿನ ಲಲಿತಾ ತಿರುವರೂರು ಜಿಲ್ಲೆಯ ಎರವಾಂಚೇರಿ ಪ್ರದೇಶದ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. 2021 ರಲ್ಲಿ ಈ ಮಹಿಳೆಗೆ ಆಗ ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಹುಡುಗನೊಂದಿಗೆ ಸಂಬಂಧವಿತ್ತು. ಲಲಿತಾ ಅಕ್ಟೋಬರ್ 26, […]

ಉಳ್ಳಾಲ | ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಮಲತಂದೆಗೆ ಜಾಮೀನು

ಉಳ್ಳಾಲ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದ ಮಲತಂದೆಗೆ ಮಂಗಳೂರಿನ ಎಫ್‌ಟಿಎಸ್‌ಸಿ 2ನೇ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಬಾಲಕಿಯನ್ನು ಆಕೆಯ ಮಲತಂದೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಅದರಂತೆ ಪೊಲೀಸರು ಆರೋಪಿಯನ್ನು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಯ ಪರ ಹಿರಿಯ ನ್ಯಾಯವಾದಿ ಎಸ್.ಎಸ್.ಖಾಝಿ ವಾದ ಮಂಡಿಸಿದ್ದು, ಅದರಂತೆ ಶುಕ್ರವಾರ […]