Flash News

ದೆಹಲಿ ಬಾಂಬ್ ಸ್ಪೋಟ; ವೈದ್ಯೆ ಡಾ. ಪ್ರಿಯಾಂಕಾ ಶರ್ಮಾ ವಶಕ್ಕೆ ಪಡೆದ ಪೊಲೀಸರು: ಆರೋಪ ನಿರಾಕರಿಸಿದ ಕುಟುಂಬ

ಹೊಸದಿಲ್ಲಿ: ರೋಹ್ಟಕ್ ಮೂಲದ ವೈದ್ಯೆ ಡಾ. ಪ್ರಿಯಾಂಕಾ ಶರ್ಮಾ ಅವರನ್ನು ʼವೈಟ್ ಕಾಲರ್ʼ ಭಯೋತ್ಪಾದಕ ಸಂಪರ್ಕದ ಶಂಕೆಯಿಂದ ಜಮ್ಮು–ಕಾಶ್ಮೀರ ಗುಪ್ತಚರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬ ಸದಸ್ಯರು ಯಾವುದೇ ಆರೋಪಗಳಿಗೆ ಆಧಾರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು Hindustan Times ವರದಿ ಮಾಡಿದೆ. ಶನಿವಾರ ಅನಂತ್‌ ನಾಗ್‌ ನ ಮಲಕ್‌ ನಾಗ್ ಪ್ರದೇಶದಲ್ಲಿರುವ ಹಾಸ್ಟೆಲ್‌ ಗೆ ತನಿಖಾಧಿಕಾರಿಗಳು ಭೇಟಿ ನೀಡಿ ಪ್ರಿಯಾಂಕಾ ಅವರನ್ನು ವಿಚಾರಣೆಗೆ ಕರೆದೊಯ್ದಿದ್ದರು. ಬಳಿಕ ಅವರನ್ನು ಬಿಡುಗಡೆ ಮಾಡಿದ್ದಾರೆ. […]

ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಶ್ವಾಸಕೋಶದ ಸಮಸ್ಯೆಯಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೇಷಾದ್ರಿಪುರಂನ ಅಪೋಲೊ ಆಸ್ಪತ್ರೆಯಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಳೆ ಸಂಜೆ ವರೆಗೆ ಆಸ್ಪತ್ರೆಯಲ್ಲೇ ಇರಲು ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ, ಸಿಎಂ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಚಾರ ತಿಳಿದು ಅಪೋಲೋ ಆಸ್ಪತ್ರೆಗೆ ಶಾಸಕ‌ ಶಿವಲಿಂಗೇಗೌಡ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ತಾಯಿ ಜೊತೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಇದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಿವಲಿಂಗೇಗೌಡ, ಸಿಎಂ‌ ಪತ್ನಿ ಅವರ ಆರೋಗ್ಯ ವಿಚಾರಿಸಲು ಬಂದೆ. […]

ಬಾಂಗ್ಲಾ ಮಾಜಿ ಪ್ರಧಾನಿಗೆ ಗಲ್ಲು ಶಿಕ್ಷೆ: ಏನಿದು ಕೇಸ್​? ಶೇಖ್ ಹಸೀನಾರ ಫಸ್ಟ್​ ರಿಯಾಕ್ಷನ್​ ಏನು?

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪಾಲಿಗೆ ಇಂದು ಕರಾಳ ದಿನ. ಏಕೆಂದರೆ, ಬಾಂಗ್ಲಾದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಹಸೀನಾ ಅವರಿಗೆ ಮರಣದಂಡನೆ ವಿಧಿಸಿದೆ. ಏಕೆಂದರೆ, ಕಳೆದ ವರ್ಷ ನಡೆದ ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಕ್ರೂರ ಕ್ರಮ ತೆಗೆದುಕೊಂಡ ಆರೋಪ ಅವರ ಮೇಲಿದೆ. ಹಲವು ತಿಂಗಳುಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯ, ಮೂರು ಆರೋಪಗಳಲ್ಲಿ ಹಸೀನಾ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ, ಮರಣದಂಡನೆ ವಿಧಿಸಿದೆ. ನ್ಯಾಯಮೂರ್ತಿ ಮೊಹಮ್ಮದ್ ಘೋಲಂ ಮೊರ್ತುಜಾ ಮಜುಂದಾರ್ ನೇತೃತ್ವದ ತ್ರಿಸದಸ್ಯ ನ್ಯಾಯಮಂಡಳಿಯು […]

ಸುರತ್ಕಲ್; ತುರ್ತಾಗಿ ಕರೆ ಮಾಡಲು ಇದೆ ಎಂದು ನಾಟಕವಾಡಿ ಮೊಬೈಲ್ ಪಡೆದು ಪರಾರಿ!

ಸುರತ್ಕಲ್: ತುರ್ತಾಗಿ ಕರೆ ಮಾಡಬೇಕು ಎಂದು ನಾಟಕವಾಡಿ ಮೊಬೈಲ್ ಕೇಳಿ ಹಿಂದಿರುಗಿಸದೆ ಚಾಲಾಕಿ ಕಳ್ಳನೊಬ್ಬ ಪರಾರಿಯಾದ ಘಟನೆ ಸುರತ್ಕಲ್ ಜಂಕ್ಷನ್ ನಲ್ಲಿ ರವಿವಾರ ನಡೆದಿದೆ. ಮನೆ ಮನೆಗೆ ಪತ್ರಿಕೆ ವಿತರಿಸುವ ಕೆಲಸ ಮಾಡುವ ಸ್ಥಳೀಯರಾದ ಮೊಹಮ್ಮದ್ ಇಕ್ಬಾಲ್ ಮೊಬೈಲ್ ಕಳೆದುಕೊಂಡವರು. ಸುರತ್ಕಲ್ ಜಂಕ್ಷನ್ ಕೆನರಾ ಬ್ಯಾಂಕ್ ಮುಂಭಾಗ ಬೆಳಗ್ಗೆ 4 ಗಂಟೆಯ ಸುಮಾರಿಗೆ ಪತ್ರಿಕೆಯ ಪುರವಣಿಯನ್ನು ಜೋಡಿಸುತ್ತಿದ್ದ ಸಂದರ್ಭ ಅಪರಿಚಿತನೊಬ್ಬ ಸ್ಕೂಟರ್ ನಲ್ಲಿ ಆಗಮಿಸಿ , ತುರ್ತಾಗಿ ಕರೆ ಮಾಡಲಿದೆ, ಮೊಬೈಲ್, ಪರ್ಸ್ ಬಿಟ್ಟು ಬಂದಿದ್ದೇನೆ ಎಂದು […]

ಪ್ಯಾಲೆಸ್ಟೈನ್​ ರಾಷ್ಟ್ರವಾಗಲು ಬಿಡುವುದಿಲ್ಲ; ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಜ್ಞೆ

ಟೆಲ್​ಅವಿವ್: ನಾವು ಪ್ಯಾಲೆಸ್ಟೈನ್ ರಾಷ್ಟ್ರವನ್ನು ಸ್ಥಾಪಿಸುವ ಯಾವುದೇ ಪ್ರಯತ್ನವನ್ನು ವಿರೋಧಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಜ್ಞೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ನೆತನ್ಯಾಹು, ಪ್ಯಾಲೆಸ್ಟೀನಿಯನ್ ರಾಷ್ಟ್ರ ರಚನೆಯಾದರೆ, ಹಮಾಸ್‌ಗೆ ಪ್ರತಿಫಲ ದೊರೆಯುತ್ತದೆ. ಅಲ್ಲದೆ, ಅಂತಿಮವಾಗಿ ಇಸ್ರೇಲ್‌ನ ಗಡಿಗಳಲ್ಲಿ ಇನ್ನೂ ದೊಡ್ಡ ಹಮಾಸ್ ನಡೆಸುವ ಉಗ್ರದಾಳಿಗೆ ಕಾರಣವಾಗುತ್ತದೆ ಎಂದಿದ್ದಾರೆ. ಪ್ಯಾಲೆಸ್ಟೀನಿಯನ್ ರಾಷ್ಟ್ರಕ್ಕೆ ಇಸ್ರೇಲ್‌ನ ವಿರೋಧವು ಒಂದು ಕ್ಷಣವೂ ಬದಲಾಗಿಲ್ಲ ಮತ್ತು ಬಾಹ್ಯ ಅಥವಾ ಆಂತರಿಕ ಒತ್ತಡದಿಂದ ಬೆದರಿಕೆಗೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ನನಗೆ ಯಾರಿಂದಲೂ ದೃಢೀಕರಣಗಳು, […]

ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

ಬೆಂಗಳೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿಸಿದ್ದು, ಗಡಿಪಾರು ಆದೇಶವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಸೂಕ್ತ ಕಾರಣ, ಸೆಕ್ಷನ್​ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ. ಧರ್ಮಸ್ಥಳದ ಬುರುಡೆ ಪ್ರಕರಣ […]

ಸೌದಿ ಅರೇಬಿಯಾದಲ್ಲಿ ಡೀಸೆಲ್​ ಟ್ಯಾಂಕರ್​ಗೆ ಬಸ್ ಡಿಕ್ಕಿ; 42 ಭಾರತೀಯರ ಸಜೀವ ದಹನ, ಸಹಾಯವಾಣಿ ಆರಂಭ

ಸೌದಿ: ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ದುರಂತವೊಂದು ಸೋಮವಾರ ಸಂಭವಿಸಿದೆ. ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು. ಈ ವೇಳೆ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಸ್ಸಿನಲ್ಲಿದ್ದ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ […]

ಸ್ಟಾರ್‌ಬಕ್ಸ್ ಕಾಫಿ ಬಹಿಷ್ಕರಿಸಲು ಕರೆ ನೀಡಿದ ನ್ಯೂಯಾರ್ಕ್‌ ನೂತನ ಮೇಯರ್‌ ಜೊಹ್ರಾನ್ ಮಾಮ್ದಾನಿ

ನ್ಯೂಯಾರ್ಕ್: ಕಾಫಿ ಬಾರ್‌ಗಳನ್ನು ನಡೆಸುವ ಜಗದ್ವಿಖ್ಯಾತ ಸಂಸ್ಥೆ ಸ್ಟಾರ್‌ಬಕ್ಸ್‌ನ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ನ್ಯೂಯಾರ್ಕ್‌ನ ನೂತನ ಮೇಯರ್‌ ಜೊಹ್ರಾನ್‌ ಮಮ್ದಾನಿ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಇದಕ್ಕೆ ಕಾರಣ ಅಮೆರಿಕದ 40ಕ್ಕೂ ಹೆಚ್ಚು ನಗರಗಳಲ್ಲಿ ಸ್ಟಾರ್‌ಬಕ್ಸ್ ಉದ್ಯೋಗಿಗಳು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ. ಮುಷ್ಕರಕ್ಕೆ ಬೆಂಬಲ ಸೂಚಿಸಿರುವ ನ್ಯೂಯಾರ್ಕ್ ನಗರದ ನೂತನ ಮೇಯರ್ ಮಾಮ್ದಾನಿ, ‘ಒಪ್ಪಂದವಿಲ್ಲದೆ ಕಾಫಿ ಇಲ್ಲ’ ಎಂದು ಘೋಷಿಸಿದ್ದಾರೆ. ಸ್ಟಾರ್‌ಬಕ್ಸ್‌ನ ವಾರ್ಷಿಕ ಪ್ರಚಾರ ದಿನವಾದ ‘ರೆಡ್ ಕಪ್ ಡೇ’ಯಂದೇ ಸಂಸ್ಥೆಯ ಉದ್ಯೋಗಿಗಳಿಂದ ಈ ಮುಷ್ಕರ ಆರಂಭವಾಗಿದೆ. ಈ ದಿನದಂದು […]

ದೆಹಲಿ ಕಾರು ಸ್ಫೋಟ ಪ್ರಕರಣ | ಯಾವುದೇ ಪುರಾವೆಗಳಿಲ್ಲ; ಮೂವರು ವೈದ್ಯರು ಸೇರಿ ನಾಲ್ವರನ್ನು ಬಿಡುಗಡೆ ಮಾಡಿದ NIA

ನವದೆಹಲಿ: ಕೆಂಪು ಕೋಟೆ ಸಮೀಪ ನ. 10ರಂದು ನಡೆದ ಭೀಕರ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ವೈದ್ಯರು ಸೇರಿದಂತೆ ನಾಲ್ವರನ್ನು ರವಿವಾರ ಬಿಡುಗಡೆ ಮಾಡಲಾಗಿದೆ. ಯಾವುದೇ ದೃಢ ಪುರಾವೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಿಡುಗಡೆ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಎಂದು India Today ವರದಿ ಮಾಡಿದೆ. ಹರಿಯಾಣದ ನುಹ್ ನಲ್ಲಿ ಬಂಧಿಸಲಾಗಿದ್ದ ಡಾ. ರೆಹಾನ್, ಡಾ. ಮುಹಮ್ಮದ್, ಡಾ. ಮುಸ್ತಕೀಮ್ ಹಾಗೂ ರಸಗೊಬ್ಬರ ವ್ಯಾಪಾರಿ ದಿನೇಶ್ ಸಿಂಗ್ಲಾ, ಈ ನಾಲ್ವರೂ […]

ಸಹಕಾರ ರಂಗ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರರಂಗ ದೇಶದ ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡುವ ಮೂಲಕ ಗ್ರಾಮೀಣ ಜನರಿಗೆ ಶಕ್ತಿ ನೀಡಿದೆ. ದೇಶದ ಅಭಿವೃದ್ಧಿಗೆ ಸಹಕಾರರಂಗ ಅಪಾರ ಕೊಡುಗೆ ನೀಡುತ್ತಿದೆ ಎಂದು ಕರ್ನಾಟಕ ರಾಜ್ಯ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಶ್ಲಾಘಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬ ದ್ಯೇಯ ವಾಕ್ಯ ದೊಂದಿಗೆ ನಗರದ ಕರಾವಳಿ […]