Flash News

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎನ್ನುವ ತಪ್ಪು ಮಾಹಿತಿಯ ಆದೇಶ ಹರಿದಾಡುತ್ತಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ನಿಧನ ಆದೇಶವನ್ನು ತಿರುಚಲಾಗಿದ್ದು, ಹರಿದಾಡುತ್ತಿರುವ ಆದೇಶಕ್ಕೆ ಸಹಿ ಮಾಡಿರುವ ಅಧಿಕಾರಿ ಸದ್ಯ ಆ ಇಲಾಖೆಯಲ್ಲಿ ಅವರು ಸೇವೆ ಸಲ್ಲಿಸುತ್ತಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. “ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ […]

ಬಿಹಾರ: ಮುಸ್ಲಿಮರು ಹೆಚ್ಚಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು!

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಮುಸ್ಲಿಮರೇ ಹೆಚ್ಚಿರುವ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಒಟ್ಟು 36 ಕ್ಷೇತ್ರಗಳಲ್ಲಿ ಮುಸ್ಲಿಮರು ನಿರ್ಣಾಯಕರಾಗಿದ್ದಾರೆ. ಮಧ್ಯಾಹ್ನ 3:30ರ ಟ್ರೆಂಡ್‌ ಪ್ರಕಾರ ಎನ್‌ಡಿಎ 25 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಬಿಜೆಪಿ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆರ್‌ಜೆಡಿ ಕೇವಲ 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರು ಮತವನ್ನು ಚಲಾವಣೆ ಮಾಡಿದ್ದರು. ಹೀಗಾಗಿ ಮುಸ್ಲಿಮ್‌ ಮಹಿಳೆಯರು ಎನ್‌ಡಿಎ ಮತ ಹಾಕಿರುವ ಸಾಧ್ಯತೆಯಿದೆ. ಓವೈಸಿ ಅವರು […]

ಮಕ್ಕಳು ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ – ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ […]

NDA ಕ್ಲೀನ್ ಸ್ವೀಪ್: ಮಹಾಘಟಬಂಧನ್‌ ಸೋಲಿಗೆ ಕಾರಣಗಳು ಇಲ್ಲಿದೆ

ಇಲ್ಲಿನ ವಿಧಾನಸಭೆ ಚುನಾವಣೆಯಲ್ಲಿ ಎನ್​ಡಿಎ ಪ್ರಚಂಡ ಗೆಲುವಿನತ್ತ ಮುನ್ನುಗ್ಗುತ್ತಿದೆ. ಸದ್ಯದ ಟ್ರೆಂಡ್ ಪ್ರಕಾರ ಎನ್​ಡಿಎ 197 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತ್ತ ಮಹಾಘಟಬಂಧನ್‌ಗೆ ಭಾರೀ ಹಿನ್ನಡೆಯಾಗಿದ್ದು, ಕೇವಲ 40 ಕ್ಷೇತ್ರಗಳಿ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್‌ ಕೂಟವು ಮತದಾನಕ್ಕೆ ಮೊದಲೇ ತೇಜಸ್ವಿ ಯಾದವ್‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಅಲ್ಲದೆ ಉದ್ಯೋಗ ಖಾತರಿ ಸೇರಿ ತಮ್ಮ ಪ್ರಣಾಳಿಕೆಯಲ್ಲಿ ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಆದರೆ ಇದು ಯಾವುದೂ ಕೈಹಿಡಿಯಲಿಲ್ಲ. ತೇಜಸ್ವಿ ಯಾದವ್‌ ನಾಯಕತ್ವದ ಆರ್‌ಜೆಡಿ ಹಿನ್ನಡೆಗೆ […]

ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಬಿಹಾರದಲ್ಲಿ NDA ಕ್ಲೀನ್ ಸ್ವೀಪ್ ; 190 ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ: ಕಾಂಗ್ರೆಸ್- ಆರ್ ಜೆಡಿ ಧೂಳೀಪಟ

ನವದೆಹಲಿ: ಬಿಹಾರ ಚುನಾವಣೆಯ ಮತ ಎಣಿಕೆಯ ಎನ್‌ಡಿಎ ಮೈತ್ರಿಕೂಟ 190ಕ್ಕೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್‌ ಡಬಲ್‌ ಡಿಜಿಟ್‌ ದಾಟಲು ಒದ್ದಾಡುತ್ತಿದೆ. ಬೆಳಗ್ಗೆ 11:15ರ ಟ್ರೆಂಡ್‌ ಪ್ರಕಾರ ಒಟ್ಟು 243 ಕ್ಷೇತ್ರಗಳಲ್ಲಿ ಎನ್‌ಡಿಎ 192, ಮಹಾಘಟಬಂಧನ್‌ 46, ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಪಕ್ಷವಾರು ಲೆಕ್ಕ ತೆಗೆದುಕೊಂಡರೆ ಬಿಜೆಪಿ 83, ಜೆಡಿಯು 80, ಆರ್‌ಜೆಡಿ 34, ಕಾಂಗ್ರೆಸ್‌ 5, ಇತರ ಪಕ್ಷಗಳು 41 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಯ ಮುಂಚಿನ ದಿನದವರೆಗೂ ಮಹಾಘಟಬಂಧನ್‌ನಲ್ಲಿ ಸೀಟು […]

ಮಂಗಳೂರು | ಮನೆಯ ಅಂಗಳದಲ್ಲಿ ವ್ಯಕ್ತಿಯ ಶವ ಪತ್ತೆ

ಉಳ್ಳಾಲ: ಕಣ್ಣಿನ ಗುಡ್ಡೆ ಕಿತ್ತೋದ ಸ್ಥಿತಿಯಲ್ಲಿ ಭೀಕರ ದಾಳಿಗೀಡಾಗಿ ಸಾವನ್ನಪ್ಪಿರುವ ವ್ಯಕ್ತಿಯೋರ್ವನ ಮೃತದೇಹವು ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿನ ಮನೆಯೊಂದರ ಅಂಗಳದಲ್ಲಿ ಸಿಕ್ಕಿದ್ದು, ಕೊಲೆಯೋ ಅಥವಾ ಪ್ರಾಣಿ ದಾಳಿಯಿಂದ ಮೃತಪಟ್ಟಿದ್ದೋ ಎಂಬ ಬಗ್ಗೆ ಶಂಕೆ ಮೂಡಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ ಗಟ್ಟಿ (53) ನಿಗೂಢವಾಗಿ ಸಾವನ್ನಪ್ಪಿರುವ ವ್ಯಕ್ತಿ. ಕುಂಪಲ ಬೈಪಾಸಿನ ಸಾಯಿ ಲಾಂಡ್ರಿಯ ಸಿಟೌಟ್ ನಲ್ಲಿ ನೋಟಿನ ಕಂತೆ ಬಿದ್ದಿದ್ದು ರಕ್ತ ಚೆಲ್ಲಿದೆ. ನೋಟಿನ ಕಂತೆಯ ಬಳಿಯೇ ದಯಾನಂದ್ ಅವರ ಒಂದು ಕಣ್ಣಿನ ಗುಡ್ಡೆ […]

ದೇಶದ ಅರ್ಧದಷ್ಟು ಜನರು ನನ್ನನ್ನು ಕೊಲ್ಲಲು ಬಯಸಿದ್ದರು: ನಟಿ ಅದಾ ಶರ್ಮಾ ಶಾಕಿಂಗ್​ ಹೇಳಿಕೆ!

ಮುಂಬೈ: 2015ರಲ್ಲಿ ಪವರ್​ಸ್ಟಾರ್ ಪುನೀತ್​ ರಾಜ್​ಕುಮಾರ್ ಮತ್ತು ಪವನ್​ ಒಡೆಯರ್ ಕಾಂಬಿನೇಷನ್​ನಲ್ಲಿ ‘ರಣವಿಕ್ರಮ’ ಸಿನಿಮಾ ತೆರೆಕಂಡಿತ್ತು. ಆ ಸಿನಿಮಾ ಮೂಲಕ ಕನ್ನಡಿಗರಿಗೂ ಪರಿಚಯವಾದ ನಟಿ ಯಾರೆಂದರೆ ಅವರೇ ಹಾಟ್​ ಬ್ಯೂಟಿ ಅದಾ ಶರ್ಮಾ. ನೀಳ ಮೈಮಾಟ ಮತ್ತು ಹಾಲಿನ ಬಣ್ಣದ ಚೆಲುವೆಯನ್ನು ಅಷ್ಟೇ ಪ್ರೀತಿಯಿಂದ ನಮ್ಮ ಕನ್ನಡಿಗರು ಸ್ವಾಗತಿಸಿದರು. ಆ ಎರಡು ಸಿನಿಮಾಗಳ ಬಳಿಕ ಅದಾ ಅವರು ಮತ್ತೆ ಕನ್ನಡಕ್ಕೆ ವಾಪಾಸ್ಸಾಗಲೇ ಇಲ್ಲ. ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ತೊಡಗಿಸಿಕೊಂಡರಾದರೂ, ಬೆರಳಣಿಕೆ ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ. ಇದೀಗ […]

ಉಪ್ಪಿನಂಗಡಿ | ವಿದ್ಯಾರ್ಥಿನಿಯ ಸಾವಿನ ಬಗ್ಗೆ ಅನುಮಾನ: ಹೆತ್ತವರಿಂದ ಪೊಲೀಸರಿಗೆ ದೂರು

ಮಂಗಳೂರು: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೀಟ ನಾಶಕ ಸೇವಿಸಿ ಆಸ್ಪತ್ರೆ ಸೇರಿದ್ದ ಬಾಲಕಿಯೊಬ್ಬಳು ಆಸ್ಪತ್ರೆ ಸೇರಿದ್ದ ಶಾಲಾ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಆಕೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ. ಮೃತ ಬಾಲಕಿಗೆ ಕಡಬ ನಿವಾಸಿಯೊಬ್ಬನೊಂದಿಗೆ ಫೋನ್ ಸಂಪರ್ಕವಿತ್ತು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಕೆಯ ತಂದೆ ತಿಳಿಸಿದ್ದಾರೆ. ಸ್ಥಳೀಯ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದ ಆಕೆ ನ. 4ರಂದು ತಲೆನೋವು ಎಂದು ಕಾರಣ ನೀಡಿ ಶಾಲೆಗೆ ಹೋಗದೆ ಮನೆಯಲ್ಲಿದ್ದಳು. ಮನೆಯಿಂದ ಹೆತ್ತವರು […]

ಕರಾವಳಿಗೆ ಮತ್ತೊಂದು ವಿಮಾನ ನಿಲ್ದಾಣ । ಉಡುಪಿಯಲ್ಲಿ ಟೇಕಾಫ್’ಗೆ ಗ್ರೀನ್ ಸಿಗ್ನಲ್

ಉಡುಪಿಗೆ ಏರ್ ಪೋರ್ಟ್ ಬೇಕೆನ್ನುವ ಎರಡು ದಶಕಗಳ ಕನಸಿಗೆ ಈಗ ರೆಕ್ಕೆಪುಕ್ಕ ಮೂಡಿದೆ. ಪಡುಬಿದ್ರಿಯಲ್ಲಿ ಏರ್ ಪೋರ್ಟ್ ನಿರ್ಮಾಣಕ್ಕಾಗಿ ರಾಜ್ಯ ಸರಕಾರದ ಐಡಿಡಿ(ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ)ಗೆ ಉಡುಪಿ ಜಿಲ್ಲಾಡಳಿತ ಇತ್ತೀಚೆಗೆ ಪ್ರಸ್ತಾವನೆ ಸಲ್ಲಿಸಿದೆ. ಸಾಮಾನ್ಯ ನಾಗರಿಕರೂ ವಿಮಾನದಲ್ಲಿಪ್ರಯಾಣಿಸುವ ಕನಸು ಬಿತ್ತಿದ ಪ್ರಧಾನಿ ಮೋದಿ ಆಶಯದಂತೆ ಜಾರಿಗೆ ಬಂದ ಉಡಾನ್ 1(ಉಡೇ ದೇಶ್ ಕಾ ಆಮ್ ನಾಗರಿಕ್ ) ಬಳಿಕ ಉಡಾನ್ 2 ಯೋಜನೆಯಡಿ ವಿಮಾನ ನಿಲ್ದಾಣ ನಿರ್ಮಾಣದ ಚಿಂತನೆ ನಡೆದಿದೆ. 935 ಎಕರೆ ಭೂಮಿ ಲಭ್ಯವಿದ್ದು, 10 […]