Flash News

ವಿಕೃತ ಕಾಮಿ ಉಮೇಶ್‌ ರೆಡ್ಡಿ ಜೈಲಲ್ಲಿ ಬಿಂದಾಸ್ ಲೈಫ್!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲ ಎನ್ನುವಂತಾಗಿದೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಇದ್ದ ವೇಳೆ ಸಿಕ್ಕ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಕಟುವಾಗಿ ಟೀಕಿಸಿತ್ತು. ಇದೀಗ ಮತ್ತೊಂದು ರಾಜಾತಿಥ್ಯ ಕೇಸ್‌ಗೆ ಪರಪ್ಪನ ಅಗ್ರಹಾರ ಜೈಲು ಸುದ್ದಿಯಾಗಿದೆ. ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನ ಆಗಿರುವ ನಟಿ ರನ್ಯಾ ರಾವ್‌ ಪ್ರಿಯಕರ ತರುಣ್‌ ರಾಜ್‌ ಜೈಲಿನಲ್ಲಿ ಬಿಂದಾಸ್‌ ಲೈಫ್‌ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ. […]

14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಮಹಿಳೆಗೆ 54 ವರ್ಷ ಜೈಲು ಶಿಕ್ಷೆ!

ತಮಿಳುನಾಡು: 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಿರುವರೂರು ಫಾಸ್ಟ್ ಟ್ರ್ಯಾಕ್ ಮಹಿಳಾ ನ್ಯಾಯಾಲಯವು ಶುಕ್ರವಾರ 39 ವರ್ಷದ ಮಹಿಳೆಗೆ 54 ವರ್ಷಗಳ ಜೈಲು ಶಿಕ್ಷೆ ಮತ್ತು 18,000 ರೂ. ದಂಡ ವಿಧಿಸಿದೆ. ಏನಿದು ಪ್ರಕರಣ, ಹಿನ್ನೆಲೆ ಏನು? ದೇಡಿಯೂರಿನ ಲಲಿತಾ ತಿರುವರೂರು ಜಿಲ್ಲೆಯ ಎರವಾಂಚೇರಿ ಪ್ರದೇಶದ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. 2021 ರಲ್ಲಿ ಈ ಮಹಿಳೆಗೆ ಆಗ ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಹುಡುಗನೊಂದಿಗೆ ಸಂಬಂಧವಿತ್ತು. ಲಲಿತಾ ಅಕ್ಟೋಬರ್ 26, […]

ಉಳ್ಳಾಲ | ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಮಲತಂದೆಗೆ ಜಾಮೀನು

ಉಳ್ಳಾಲ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದ ಮಲತಂದೆಗೆ ಮಂಗಳೂರಿನ ಎಫ್‌ಟಿಎಸ್‌ಸಿ 2ನೇ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಬಾಲಕಿಯನ್ನು ಆಕೆಯ ಮಲತಂದೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಅದರಂತೆ ಪೊಲೀಸರು ಆರೋಪಿಯನ್ನು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಯ ಪರ ಹಿರಿಯ ನ್ಯಾಯವಾದಿ ಎಸ್.ಎಸ್.ಖಾಝಿ ವಾದ ಮಂಡಿಸಿದ್ದು, ಅದರಂತೆ ಶುಕ್ರವಾರ […]

ತನ್ವಿರ್ ಅಹ್ಮದ್‌ ನೇತೃತ್ವದಲ್ಲಿ ಧರ್ಮಸ್ಥಳ ಪರ ಪಾದಯಾತ್ರೆ

ಬೆಂಗಳೂರು: ‘ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ವಿರೋಧಿಸಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ ನಾವಿದ್ದೇವೆ ಎಂದು ಸಾರಲು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತ ತನ್ವಿರ್ ಅಹ್ಮದ್‌ ತಿಳಿಸಿದ್ದಾರೆ. ವಿಶೇಷ ತನಿಖಾ ದಳ ವಿಚಾರಣೆ ಆರಂಭಿಸಿದ ಬಳಿಕ ಅನೇಕ ಆರೋಪಗಳು ನಿರಾಧಾರ ಎಂದು ಸಾಬೀತಾಗಿದೆ. ಆದರೂ ಜನರ ಮನಸ್ಸಲ್ಲಿ ಧರ್ಮಸ್ಥಳದ ಬಗ್ಗೆ ಮೂಡಿರುವ ತಪ್ಪು ಭಾವನೆಗಳನ್ನು ಹೋಗಲಾಡಿಸಲು ಈ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ‘ನ.18ರಂದು ಧರ್ಮಸ್ಥಳದಲ್ಲಿ ನಡೆಯಲಿರುವ ಸರ್ವಧರ್ಮ […]

ಮುಸ್ಲಿಮರ ಮನಗೆಲ್ಲಲು ಜನಸಂಪರ್ಕ ಕಾರ್ಯಕ್ರಮ: ಕೇರಳ ಬಿಜೆಪಿ ಘಟಕ

ತಿರುವನಂತಪುರ: ಕೇರಳದಲ್ಲಿ ಮುಸ್ಲಿಮರನ್ನು ತಲುಪಲು ಜನಸಂಪರ್ಕ ಕಾರ್ಯಕ್ರಮವನ್ನು ಆರಂಭಿಸುತ್ತಿರುವುದಾಗಿ ಬಿಜೆಪಿಯ ಕೇರಳ ಘಟಕ ಹೇಳಿದೆ. ‘ಇದು ರಾಜಕೀಯೇತರ ಕಾರ್ಯಕ್ರಮವೇ ಹೊರತು ಮತ ಪಡೆಯಲು ಅಲ್ಲ. ಬದಲಿಗೆ ಪಕ್ಷದ ಪರವಾದ ನಂಬಿಕೆಯನ್ನು ಹೆಚ್ಚಿಸುವ ಕಾರ್ಯಕ್ರಮ ಇದಾಗಿದೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರಾಜೀವ ಚಂದ್ರಶೇಖರ್ ಹೇಳಿದ್ದಾರೆ. ‘ಈ ಕಾರ್ಯಕ್ರಮವು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಅಬ್ದುಲ್ ಸಲಾಂ ಅವರ ಮುಂದಾಳತ್ವದಲ್ಲಿ ನಡೆಯಲಿದೆ. ಬಿಜೆಪಿಯು ಮುಸ್ಲಿಂ ಸಮುದಾಯದ ವಿರೋಧಿ ಎಂಬ ತಪ್ಪು ಕಲ್ಪನೆಯನ್ನು ತೊಡೆದುಹಾಕುವುದು ಈ ಕಾರ್ಯಕ್ರಮದ ಮುಖ್ಯ […]

ತಿಂಗಳಿಗೆ 10 ಲಕ್ಷ ಜೀವನಾಂಶ ಕೇಳಿದ ಶಮಿ ಪತ್ನಿ; 4 ಲಕ್ಷ ಸಾಕಾಗುವುದಿಲ್ಲವೇ ಎಂದು ಕೇಳಿದ ಸುಪ್ರೀಂ ಕೋರ್ಟ್‌

ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಅವರ ಬದುಕು ಸೂತ್ರ ಹರಿದ ಗಾಳಿಪಟದಂತ್ತಾಗಿದೆ. ಒಂದೆಡೆ ಅವರ ವೃತ್ತಿಬದುಕು ಮುಗಿಯುವ ಹಂತಕ್ಕೆ ಬಂದಿದ್ದರೆ, ಇನ್ನೊಂದೆಡೆ ಅವರ ವೈಯಕ್ತಿಕ ಬದುಕು ಕೂಡ ಹಳಿ ತಪ್ಪಿ ವರ್ಷಗಳೇ ಕಳೆದಿವೆ. ರಣಜಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಟೀಂ ಇಂಡಿಯಾಕ್ಕೆ ಮತ್ತೆ ಸೇರಿಕೊಳ್ಳುವ ನಿರೀಕ್ಷೆಯಲ್ಲಿದ್ದ ಶಮಿಗೆ ಬಿಸಿಸಿಐ ಆಘಾತ ನೀಡಿದೆ. ಇದೀಗ ಅವರ ವೈಯಕ್ತಿಕ ಬದುಕಿನಲ್ಲಿ ಅವರ ಮಾಜಿ ಪತ್ನಿ ಹಸಿನ್ ಜಹಾನ್ ಜೊತೆಗಿನ ವಿವಾದ ಮತ್ತೊಮ್ಮೆ ಬೆಳಕಿಗೆ ಬಂದಿದೆ. ವಾಸ್ತವವಾಗಿ ಶಮಿ […]

ದುರಂತಕ್ಕೆ ಪೈಲೆಟ್​ ದೂಷಿಸಬೇಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್​ ನೋಟಿಸ್!

ನವದೆಹಲಿ: ಭಾರತೀಯ ವಾಯುಯಾನ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ ಎಂದು ಕರೆಯಲಾದ ಅಹಮದಾಬಾದ್ ಏರ್ ಇಂಡಿಯಾ​ ವಿಮಾನ ಅಪಘಾತದ ಬಗ್ಗೆ ಇಂದಿಗೂ ಕೆಲವರಲ್ಲಿ ಗೊಂದಲಗಳು ಬಗೆಹರಿದಿಲ್ಲ. ವಿಮಾನ ದುರಂತದ ಪ್ರಾಥಮಿಕ ವರದಿ ಹೊರಬಿದ್ದಿದ್ದರೂ ದುರಂತಕ್ಕೆ ಪೈಲೆಟ್​ ನೇರ ಹೊಣೆಯೇ? ಎಂಬುದು ಅಸ್ಪಷ್ಟವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮೃತ ಪೈಲೆಟ್​ ತಂದೆ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ಸುಪ್ರೀಂ ಕೋರ್ಟ್​ ಆಲಿಸಿತು. ಘಟನೆಯ ಕಾರಣವನ್ನು ನಿರ್ಧರಿಸಲು ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಏರ್ ಇಂಡಿಯಾ ಪೈಲಟ್‌ ಸುಮೀತ್ […]

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್​ ಕುಮಾರ್​ ವಿರುದ್ಧ ಪ್ರಿಯಾಂಕಾ ಗಾಂಧಿ ಬಹಿರಂಗ ಆಕ್ರೋಶ

ರಿಗಾ: ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್​ ಕುಮಾರ್ ಗೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ. ರಿಗಾದಲ್ಲಿ ನಡೆದ ರ‍್ಯಾಲಿಯಲ್ಲಿ ಸಭ್ಯತೆಯನ್ನು ಮರೆತು ವರ್ತಿಸಿದ್ದಾರೆ. ‘‘ನೀವು ನೆಮ್ಮದಿಯಿಂದ ನಿವೃತ್ತರಾಗಲು ಸಾಧ್ಯವಿಲ್ಲ, ಜ್ಞಾನೇಶ್ ಕುಮಾರ್ ಅವರ ಹೆಸರನ್ನು ನೀವು ಎಂದಿಗೂ ಮರೆಯಬಾರದು ಎಂದು ನಾನು ಸಾವ್ಝನಿಕರಲ್ಲಿ ಮನವಿ ಮಾಡುತ್ತೇನೆ’’ ಎಂದ ಪ್ರಿಯಾಂಕಾ ಎಸ್​ಎಸ್ ಸಂಧು ಹಾಗೂ ವಿವೇಕ್ ಜೋಶಿ ಹೆಸರುಗಳನ್ನು ಕೂಡ ಹೇಳಿದ್ದಾರೆ. ‘‘ಹರಿಯಾಣದಲ್ಲಿ ಮತಗಳನ್ನು ಹೇಗೆ ಕದಿಯಲಾಗಿದೆ ಎಂಬುದನ್ನು ನೀವೆಲ್ಲರೂ […]

ಗಂಡು ಮಗುವಿಗೆ ಜನ್ಮ ನೀಡಿದ ಕತ್ರಿನಾ ಕೈಫ್!

ಮುಂಬೈ: ಬಾಲಿವುಡ್ ದಂಪತಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಇಂದು (ನವೆಂಬರ್ 7) ಗಂಡು ಮಗುವಿನ ಪೋಷಕರಾಗಿದ್ದಾರೆ. ವಿಕ್ಕಿ ಕೌಶಲ್ ಸಾಮಾಜಿಕ ಮಾಧ್ಯಮದಲ್ಲಿ ಈ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ. “ನನಗೆ ತುಂಬಾ ಸಂತೋಷವಾಗಿದೆ. ಬಾಬು ನಮ್ಮ ಪ್ರೀತಿಯ ಪ್ರತಿಬಿಂಬವಾಗಿ ಜನಿಸಿದರು. ನನಗೆ ನಿಮ್ಮೆಲ್ಲರ ಆಶೀರ್ವಾದ ಬೇಕು” ಎಂದು ವಿಕ್ಕಿ ಕೌಶಲ್ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ಗೆ ಪ್ರತಿಕ್ರಿಯಿಸುತ್ತಾ, ಅನೇಕ ಚಲನಚಿತ್ರ ಸೆಲೆಬ್ರಿಟಿಗಳು ಮತ್ತು ನೆಟಿಜನ್‌ಗಳು ದಂಪತಿಗೆ ಶುಭ ಹಾರೈಸುತ್ತಿದ್ದಾರೆ. ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ […]

ಬೆಂಗಳೂರು | ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ RSS ಮುಖಂಡ ಮೋಹನ್‌ ಭಾಗವತ್‌ ಭೇಟಿ: ಪೂಜೆ, ಪ್ರಾರ್ಥನೆ ಸಲ್ಲಿಕೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕಿಂದು ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ ಪಡೆದರು. ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಢೆ, ಕ್ಷೇತ್ರೀಯ ಪ್ರಚಾರಕ್ ಭರತ್ ಕುಮಾರ್ ಉಪಸ್ಥಿತರಿದ್ದರು. ರಾಷ್ಟೀಯ ಸ್ವಯಂಸೇವಕ ಸಂಘವು (RSS) ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 […]