ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಬ್ಬ ಡಿಕ್ಟೇಟರ್, ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ನಮ್ಮನ್ನು ಮತ್ತೆ ಗುಲಾಮಗಿರಿಗೆ ತಳ್ಳುತ್ತಿದ್ದಾರೆ. ರಷ್ಯಾದಿಂದ ಈಗ ಒಂದು ತಿಂಗಳ ಮಾತ್ರ ತೈಲ ಖರೀದಿಗೆ ಅಮೆರಿಕ ಅನುಮತಿ ನೀಡಿದೆ. ಅಮೆರಿಕದವರು ಹೇಳಿದಂತೆ ಮೋದಿ ಕೇಳುತ್ತಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರಿವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, […]
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಅಹ್ಮದಾಬಾದ್: ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಎದುರಾಳಿ ತಂಡಕ್ಕೆ 256 ರನ್ ಗಳ ಅತ್ಯಧಿಕ ರನ್ ಟಾರ್ಗೆಟ್ ನೀಡಿತ್ತು. ಭಾರತದ ಪರ ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಭಾರತ ಬೃಹತ್ ಮೊತ್ತ ಗಳಿಸಲು ಸಾಧ್ಯವಾಯಿತು. ಬೃಹತ್ ರನ್ ಚೇಸಿಂಗ್ ಗೆ ಇಳಿದ ನ್ಯೂಜಿಲ್ಯಾಂಡ್ ತಂಡ […]
ಅನಿವಾಸಿ ಕನ್ನಡಿಗರ ಪಾಲಿಗೆ ನಿರಾಶೆಯ ಬಜೆಟ್: ರಝಾಕ್ ಮಂಗಳೂರು (ದುಬೈ)

ದುಬೈ: ಅನಿವಾಸಿ ಕನ್ನಡಿಗರ ಪಾಲಿಗೆ ನಿರಾಶೆಯ ಬಜೆಟ್ ಎಂದು ರಝಾಕ್ ಮಂಗಳೂರು (ದುಬೈ) ಹೇಳಿದ್ದಾರೆ. ಕರ್ನಾಟಕ ರಾಜ್ಯ ಸರಕಾರ ಮಂಡಿಸಿದ2026-2027ನೇ ಸಾಲಿನ ಬಜೆಟ್‌ನಲ್ಲಿ ಅನಿವಾಸಿ ಕನ್ನಡಿಗರ ಪಾಲಿಗೆ ನಿರಾಶೆಯ ಬಜೆಟ್ ಆಗಿದೆ. ಅನಿವಾಸಿ ಕನ್ನಡಿಗರು ಸಿದ್ದರಾಮಯ್ಯ ಸರಕರಾದ ಮೇಲೆ ಇಟ್ಟಂತಹ ನಿರೀಕ್ಷೆ ಹುಸಿಯಾಗಿದೆ. ಬೆಳಗಾವಿ ಅದಿವೇಶನದ ಸಮಯದಲ್ಲಿ ಅನೇಕ ದೇಶದ ಸುಮಾರು 40ಕ್ಕೂ ಅಧಿಕ ಕರ್ನಾಟಕದ ಉದ್ಯಮಿಗಳು ಸಿಎಂ ಮತ್ತು ಡಿಸಿಎಂ ಬೇಟಿಯಾಗಿ ಅನಿವಾಸಿ ಕನ್ನಡಿಗರ ಪರವಾದ ಅನೇಕ ಸಮಸ್ಯೆಗಳ ಬಗ್ಗೆ ಬೇಡಿಕೆಯಿಟ್ಟಿದ್ದರು.ಆ ಸಮಯದಲ್ಲಿ ಇದಕ್ಕೆ ಪೂರಕವಾಗಿಸಿಎಂ […]
‘ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ…’: ಗಲ್ಫ್ ರಾಷ್ಟ್ರಗಳ ಕ್ಷಮೆ ಕೋರಿದ ಇರಾನ್

ಟೆಹ್ರಾನ್: ಇರಾನ್-ಇಸ್ರೇಲ್ ಅಮೆರಿಕ ಸಂಘರ್ಷ ಮುಂದುವರೆದಿರುವಂತೆಯೇ ಅಚ್ಚರಿ ಬೆಳವಣಿಗೆಯಲ್ಲಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ (Masoud Pezeshkian) ನೆರೆಯ ರಾಷ್ಟ್ರಗಳಿಗೆ ಕ್ಷಮೆಯಾಚಿಸಿದ್ದಾರೆ. ಇರಾನ್ ಮೇಲಿನ ದಾಳಿ ಮತ್ತು ತಮ್ಮ ಸರ್ವೋಚ್ಛ ನಾಯಕ ಆಯತೊಲ್ಲ ಅಲಿ ಖಮೇನಿ ವಿಚಾರವಾಗಿ ಕೆಂಡಾಮಂಡಲವಾಗಿರುವ ಇರಾನ್ ಅಚ್ಚರಿ ಬೆಳವಣಿಗೆಯಲ್ಲಿ ತನ್ನ ನೆರೆಹೊರೆ ರಾಷ್ಟ್ರಗಳ ಕ್ಷಮೆಕೋರಿದೆ. ನೆರೆಹೊರೆಯವರಿಗೆ ‘ಕ್ಷಮಿಸಿ’ ಎಂದು ಮಸೌದ್ ಪೆಜೆಶ್ಕಿಯಾನ್ ಹೇಳಿದ್ದು,ಆ ಮೂಲಕ ಅಮೆರಿಕ-ಇಸ್ರೇಲ್ ಜೊತೆಗಿನ ಯುದ್ಧದ ಮಧ್ಯೆ ಉದ್ವಿಗ್ನತೆಯನ್ನು ಶಮನಗೊಳಿಸಲು ಮೊದಲ ಪ್ರಮುಖ ಹೆಜ್ಜೆ ಇಟ್ಟಿದೆ. ಹಾಲಿ ಸಂಘರ್ಷ ಉಲ್ಬಣವನ್ನು ಶಮನಗೊಳಿಸುವ […]
ಪ್ರಧಾನಿ ಮೋದಿ ಪ್ರವಾಸದ ಬಳಿಕ ಇರಾನ್ ಮೇಲಿನ ದಾಳಿಗೆ ನಿರ್ಧಾರ: ಇಸ್ರೇಲ್ ವಿದೇಶಾಂಗ ಸಚಿವ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರವಾಸ ಮುಗಿಸಿದ ಬಳಿಕ ಇರಾನ್ ಮೇಲಿನ ಮಿಲಿಟರಿ ದಾಳಿಯ ಬಗ್ಗೆ ನಿರ್ಣಯ ಕೈಗೊಂಡಿದ್ದೇವೆ ಎಂದು ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಎರಡು ದಿನಗಳ ಇಸ್ರೇಲ್ ಪ್ರವಾಸ ಫೆಬ್ರವರಿ 26 ರಂದು ಮುಕ್ತಾಯವಾಯಿತು. ನಂತರ ಎರಡು ದಿನದ ಬಳಿಕ, ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ಜಂಟಿ ಮಿಲಿಟರಿ ದಾಳಿ ಪ್ರಾರಂಭಿಸಿ, ಇರಾನ್ ಸುಪ್ರೀಂ ನಾಯಕ ಖಮೇನಿ ಸೇರಿದಂತೆ ಪ್ರಮುಖ ಸೇನಾ ಕಮಾಂಡರ್ […]
ಖಮೇನಿ ಜೀವಂತ?: ಸಂಚಲನ ಸೃಷ್ಟಿಸಿದ ಮೊದಲ ಪ್ರತೀಕಾರದ ಪೋಸ್ಟ್

ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲ ಖಮೇನಿ ಹತ್ಯೆಯಾಗಿದ್ದಾರೆ. ಈ ಕುರಿತು ಇರಾನ್ ಸ್ಪಷ್ಟಪಡಿಸಿತ್ತು. ಇರಾನ್, ಭಾರತದ ಕೆಲವೆಡೆ ಸೇರಿದಂತೆ ವಿಶ್ವದೆಲ್ಲೆಡೆ ಶೋಕಾಚರಣೆ ಆಚರಿಸಲಾಗಿದೆ. ಇದೇ ವೇಳೆ ಹಲವಡೆ ಹತ್ಯೆ ಖಂಡಿಸಿ ಪ್ರತಿಭಟನೆಗಳು ನಡೆದಿದೆ. ಆದರೆ ಇದೀಗ ಹತ್ಯೆಯಾದ ಆಯತೊಲ್ಲಾ ಖಮೇನಿ ಅಧಿಕೃತ ಎಕ್ಸ್ ಖಾತೆಯಿಂದ ಪ್ರತೀಕಾರದ ಪೋಸ್ಟ್ ಭಾರಿ ಸಂಚಲನ ಸೃಷ್ಟಿಸಿದೆ. ಹತ್ಯೆಯಾಗಿರುವ ಖಮೇನಿ ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ? ಈ ಅನುಮಾನ ಮೂಡಲು ಕಾರಣ ಇದೀಗ ಖಮೇನಿ […]
Karnataka: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಘೋಷಿಸಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ […]
ಅಮೆರಿಕಾದ ಸೇನಾ ಕಾರ್ಯಾಚರಣೆಗೆ ತನ್ನ ಪ್ರದೇಶ ಬಳಸಲು ಅವಕಾಶ ನೀಡದ ಸೌದಿ: ಇರಾನ್ ಧನ್ಯವಾದ

ರಿಯಾದ್: ಅಮೆರಿಕ ಮತ್ತು ಇಸ್ರೇಲ್ ಜೊತೆ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲಿ ತನ್ನ ವಾಯುಪ್ರದೇಶ, ಜಲಪ್ರದೇಶ ಅಥವಾ ಭೂಪ್ರದೇಶವನ್ನು ಇರಾನ್ ವಿರುದ್ಧ ಬಳಸಲು ಅವಕಾಶ ನೀಡುವುದಿಲ್ಲ ಎಂಬ ಸೌದಿ ಅರೇಬಿಯಾದ ನಿಲುವಿಗೆ ಇರಾನ್ ಕೃತಜ್ಞತೆ ಸಲ್ಲಿಸಿದೆ. ಸೌದಿ ಅರೇಬಿಯಾದಲ್ಲಿನ ಇರಾನ್ ರಾಯಭಾರಿ ಅಲಿರೆಝಾ ಎನಾಯತಿ ಅವರು ಈ ಕುರಿತು ಎಎಫ್‌ಪಿಗೆ ಪ್ರತಿಕ್ರಿಯೆ ನೀಡಿದ್ದು, ‘ಇಸ್ಲಾಮಿಕ್ ಗಣರಾಜ್ಯ ಇರಾನ್ ವಿರುದ್ಧ ತನ್ನ ವಾಯುಪ್ರದೇಶ, ನೀರು ಅಥವಾ ಪ್ರದೇಶವನ್ನು ಬಳಸಲು ಅನುಮತಿಸುವುದಿಲ್ಲ ಎಂದು ಸೌದಿ ಅರೇಬಿಯ ಹೇಳುತ್ತಲೇ ಬಂದಿದೆ. ಆ ನಿಲುವನ್ನು […]
ಚಿಕ್ಕಮಗಳೂರು| ಉರೂಸ್ ಆಚರಣೆಗೆ ತಾರತಮ್ಯ: ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿಬಿದ್ದ ಮುಸ್ಲಿಮರು

ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಉರುಸ್ ಆಚರಣೆ ವೇಳೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದವರು ರಾಜ್ಯ ಕಾಂಗ್ರೆಸ್ ಸರ್ಕಾರದ ತಿರುಗಿ ಬಿದ್ದಿದ್ದಾರೆ. ಗೋರಿಗಳ ಮೇಲೆ ಹಸಿರು ಬಟ್ಟೆ, ಗಂಧ ಲೇಪನ ಮಾಡದ ಹಿನ್ನಲೆ ಜನ ಶಕ್ತಿ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಿನ್ನೆಯಿಂದ ಸೆಂದಿಲ್ ಉರುಸ್ ಆರಂಭವಾಗಿದೆ. ನಿನ್ನೆ ವಿವಾದಿತ […]
ಅಮ್ಮೆಮ್ಮಾರ್: ಅಪಾಯದಲ್ಲಿದ್ದ ವಿದ್ಯುತ್ ಕಂಬ ಸ್ಥಳಾಂತರ

ಅಮ್ಮೆಮ್ಮಾರ್: ಪುದು ಗ್ರಾಮದ ಅಮ್ಮೆಮ್ಮಾರ್ ಬಳಿ ಹಲವು ವರ್ಷಗಳಿಂದ ಅಪಾಯದಲ್ಲಿ ವಿದ್ಯುತ್ ಕಂಬವನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ರಝಕ್ ಅವರ ಮುತುವರ್ಜಿಯಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಲ್ಲ ಹಾಗೂ ಉಪಾಧ್ಯಕ್ಷೆ ರುಕ್ಷಾನ ಅವರ ಸಹಕಾರದೊಂದಿಗೆ ಪುದು ಗ್ರಾಮ ಪಂಚಾಯತ್ ಸದಸ್ಯರಾದ ರಝಾಕ್ ಸತತ ಪ್ರಯತ್ನದಿಂದ ಮನೆ ಅಪಾಯದಲ್ಲಿದ್ದ ವಿದ್ಯುತ್ ತಂತಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಈ ವೇಳೆ ಸದಸ್ಯರಾದ ಮಹಮ್ಮದ್ ಆನಸ್ ಸಾರಮ್ಮ, ಆತಿಕ, ನಬಿಸ ಮುಂತಾದವರು ಉಪಸ್ಥಿತಿರಿದ್ದರು.