ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14ನೇ ಆರೋಪಿಗೆ ಜಾಮೀನು ಮಂಜೂರಾಗಿದೆ.
ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ರವಿ ಸಂಜಯ್ ನನ್ನು ಪೊಲೀಸರು ಬಂಧಿಸಿದ್ದರು. ಇಂದು ನ್ಯಾಯಾಲಯ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
2 ಲಕ್ಷ ವೈಯಕ್ತಿಕ ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಜೊತೆ ಹಲವು ಷರತ್ತು ವಿಧಿಸಲಾಗಿದ್ದು, A14 ಆರೋಪಿಯು ಕೇಸ್ ಮುಗಿಯುವ ತನಕ ನಿರಂತರ ಕೋರ್ಟ್‌ಗೆ ಹಾಜರಾಗಬೇಕು, ಅಪರಾಧಗಳಲ್ಲಿ ಭಾಗಿಯಾಗಬಾರದು, ನ್ಯಾಯಾಲಯಕ್ಕೆ ಪಾಸ್‌ಪೋರ್ಟ್ ಒಪ್ಪಿಸಬೇಕು, ಮುಂದಿನ ಆದೇಶವರೆಗೆ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ವ್ಯಾಪ್ತಿಯಿಂದ ಹೊರಗೆ ತೆರಳಬಾರದು ಎಂಬ ಷರತ್ತು ವಿಧಿಸಲಾಗಿದೆ.



