Flash News

ಕೆಂಪು ಕೋಟೆ ಬಳಿ ಕಾರು ಸ್ಫೋಟ: ಓರ್ವ ಶಂಕಿತ ಪೊಲೀಸ್ ವಶಕ್ಕೆ

ನವದೆಹಲಿ: ರಾಷ್ಟ್ರರಾಜಧಾನಿಯ ಹೃದಯಭಾಗದಲ್ಲಿಂದು ಕೆಂಪು ಕೋಟೆ ಬಳಿ ಸಂಭವಿಸಿದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿ ವಿಶೇಷ ಘಟಕ ಅಧಿಕಾರಿಗಳ ತಂಡ ಓರ್ವ ಶಂಕಿತನ್ನ ವಶಕ್ಕೆ ಪಡೆದಿದೆ. ವಿಚಾರಣೆ ಬಳಿಕವೇ ಸ್ಪೋಟಕ ರಹಸ್ಯ ಹೊರಬೀಳಬೇಕಿದೆ.

ಕೆಂಪು ಕೋಟೆ ಸಮೀಪದ ಲಾಲ್‌ ಕಿಲಾ ಮೆಟ್ರೋ ನಿಲ್ದಾಣ ಗೇಟ್ ಸಂಖ್ಯೆ-1ರ ಬಳಿ ಸೋಮವಾರ ಸಂಜೆ 6:45 ರಿಂದ 7 ಗಂಟೆ ಅವಧಿಯಲ್ಲಿ ಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ ಈವರೆಗೆ 10ಕ್ಕೆ ಏರಿಕೆಯಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ