Flash News

ಕಾಂಗ್ರೆಸ್ ಯುವ ಮುಖಂಡನಿಗೆ ಚಾಕು ಇರಿತ

ಚಾಮರಾಜನಗರ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ಕಾಂಗ್ರೆಸ್ ಯುವ ಮುಖಂಡನಿಗೆ ಚಾಕುವಿನಿಂದ ಇರಿದಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿಯಲ್ಲಿ ನಡೆದಿದೆ. ತೇರಂಬಳ್ಳಿ ಗ್ರಾಮದ ರಾಜಣ್ಣ ಎಂಬ ವ್ಯಕ್ತಿಯಿಂದ ಕೈ ಮುಖಂಡ ಸುನೀಲ್​ಗೆ ಚಾಕು ಇರಿಯಲಾಗಿದೆ. ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಉಂಟಾಗಿದೆ. ಈ ವೇಳೆ ರಾಜಣ್ಣ ಎಂಬುವವರು ಸುನೀಲ್​​ಗೆ ಚಾಕುವಿನಿಂದ ಇರಿದಿದ್ದಾರೆ. ಚಾಕುವಿನಿಂದ ಇರಿದ ಹಿನ್ನಲೆ ರಕ್ತಸ್ರಾವ ಉಂಟಾಗಿ ಸುನೀಲ್​​ ಅಸ್ವಸ್ಥರಾಗಿದ್ದಾರೆ. ಕೂಡಲೇ ಗಾಯಾಳು ಸುನೀಲ್​ನನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.