ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅವರು ಮಾರ್ಚ್ 10 (ಇಂದು) 6 ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆ ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಅಲಿ ಡಿಸಿಎಂ ಭೇಟಿಯಾಗಿ ಶುಭಕೋರಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಇನಾಯತ್ ಅಲಿ,ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ 6 ವರ್ಷ ಪೂರೈಸಿರುವ ಮಾನ್ಯ ಉಪ ಮುಖ್ಯಮಂತ್ರಿಗಳು, ನಮ್ಮ ನಾಯಕರಾದ ಸನ್ಮಾನ್ಯ ಶ್ರೀ DK Shivakumar ಅವರನ್ನು ಇಂದು ಭೇಟಿಯಾಗಿ ಶುಭಾಶಯ ಕೋರಲಾಯಿತು.
ಪಕ್ಷ ಸಂಘಟನೆ, ಸೈದ್ಧಾಂತಿಕ ಬದ್ಧತೆಯೊಂದಿಗೆ ತಮ್ಮ ದಿಟ್ಟ ನಾಯಕತ್ವದ ಮೂಲಕ ಮಾನ್ಯ ಡಿ.ಕೆ. ಶಿವಕುಮಾರ್ ಅವರು ಸದಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ರೋಲ್ ಮಾಡೆಲ್ ಎಂದು ಹೇಳಿದ್ದಾರೆ.



