ಬೆಂಗಳೂರು: ರಾಜ್ಯದ ಪ್ರತಿ ಮನೆ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ʻಗೃಹಲಕ್ಷ್ಮಿʼಯರ ಖಾತೆಗಳಿಗೆ 1 ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಕಂತು ಅಂತ ಹೇಳ್ತೀನಿ. ತಿಂಗಳ ಹೆಸರು ಹೇಳಲ್ಲ. ಈಗಾಗಲೇ ಆರ್ಥಿಕ ಇಲಾಖೆ ಅವರು ನಮಗೆ 24ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಸೋಮವಾರದಿಂದ (ಡಿ.22) ಮುಂದಿನ ಶನಿವಾರದ ಒಳಗೆ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ ಅಂತ ತಿಳಿಸಿದ್ದಾರೆ
ರಾಜ್ಯದ 1.26 ಕೋಟಿ ಗೃಹಲಕ್ಷ್ಮಿಯರ ಖಾತೆಗೆ ಸೋಮವಾರದಿಂದ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದಿರುವ ಸಚಿವರು, ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಡುಗಡೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಿಲ್ಲ.



