Flash News

ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ: ಖಚಿತಪಡಿಸಿದ ಇರಾನ್

ವಾಷಿಂಗ್ಟನ್: ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆಯಾಗಿದೆ ಎಂದು ವರದಿಯಾಗಿದೆ.

ಇಸ್ಲಾಮಿಕ್ ಗಣರಾಜ್ಯದ ಮೇಲೆ ಅಮೆರಿಕ-ಇಸ್ರೇಲಿ ನಡೆಸಿದ ಜಂಟಿ ದಾಳಿಯಲ್ಲಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಸ್ಟೇಟ್ಸ್‌ ಮೀಡಿಯಾ ಖಚಿತಪಡಿಸಿದೆ. ಈ ಬೆಳವಣಿಗೆ ಬಳಿಕ ಇರಾನ್‌ ದೇಶಾದ್ಯಂತ 40 ದಿನಗಳ ಶೋಕಾಚರಣೆ ಘೋಷಿಸಿದೆ.

“ಇತಿಹಾಸದ ಅತ್ಯಂತ ದುಷ್ಟ ಜನರಲ್ಲಿ ಒಬ್ಬರಾದ ಖಮೇನಿ ಸಾವನ್ನಪ್ಪಿದ್ದಾರೆ. ಇದು ಇರಾನ್ ಜನರು ಮಾತ್ರವಲ್ಲ, ಎಲ್ಲಾ ಅಮೆರಿಕನ್ನರು ಖಮೇನಿ ಮತ್ತವರ ರಕ್ತಪಿಪಾಸು ಗುಂಪಿನಿಂದ ಕೊಲ್ಲಲ್ಪಟ್ಟ ಅಥವಾ ಅಂಗವಿಕಲರಾದ ಜಗತ್ತಿನಾದ್ಯಂತದ ಅನೇಕ ದೇಶಗಳ ಜನರಿಗೆ ದೊರೆದ ನ್ಯಾಯ. ಖಮೇನಿ ನಮ್ಮ ಗುಪ್ತಚರ ಮತ್ತು ಅತ್ಯಾಧುನಿಕ ಟ್ರ್ಯಾಕಿಂಗ್ ವ್ಯವಸ್ಥೆಗಳನ್ನು ತಪ್ಪಿಸಲು ಸಾಧ್ಯವಾಗಿಲ್ಲ. ಇರಾನಿನ ಜನರು ತಮ್ಮ ದೇಶವನ್ನು ಮರಳಿ ಪಡೆಯಲು ಇದು ಏಕೈಕ ದೊಡ್ಡ ಅವಕಾಶ. ಇರಾನ್‌ನ ಐಆರ್‌ಜಿಸಿ, ಸೇನೆ ಮತ್ತಿತರ ಭದ್ರತಾ ಮತ್ತು ಪೊಲೀಸ್ ಪಡೆಗಳು ಇನ್ನು ಮುಂದೆ ನಮ್ಮೊಂದಿಗೆ ಹೋರಾಡಲು ಬಯಸುವುದಿಲ್ಲ. ಭಾರೀ ಮತ್ತು ನಿಖರವಾದ ಬಾಂಬ್ ದಾಳಿ ವಾರವಿಡೀ ನಿರಂತರವಾಗಿ ಮುಂದುವರಿಯುತ್ತದೆ” ಎಂದು ಟ್ರಂಪ್ ತಿಳಿಸಿದ್ದಾರೆ.