Flash News

ಜಾರ್ಖಂಡ್‌ನಲ್ಲಿ ಜೆಎಂಎಂ, ಬಿಜೆಪಿ ಮೈತ್ರಿ ಸರ್ಕಾರ?

ನವದೆಹಲಿ: ಬಿಹಾರದಲ್ಲಿ ಮರಳಿ ಅಧಿಕಾರಕ್ಕೆ ಏರಿದ ಬೆನ್ನಲ್ಲೇ ಜಾರ್ಖಂಡ್‌ನಲ್ಲೂ ಎನ್‌ಡಿಎ ಸರ್ಕಾರ ರಚನೆಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಪತ್ನಿ ಕಲ್ಪನಾ ಅವರು ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳ ನಡುವೆ, ರಾಜ್ಯದಲ್ಲಿ ಅಧಿಕಾರ ಬದಲಾವಣೆಯಾಗಬಹುದು ಎಂಬ ಊಹಾಪೋಹಗಳು ಹರಡಿವೆ.

ಹೇಮಂತ್ ಸೊರೆನ್ ಮತ್ತು ಕಲ್ಪನಾ ಸೊರೆನ್ ಕಳೆದ ಹಲವು ದಿನಗಳಿಂದ ದೆಹಲಿಯಲ್ಲಿದ್ದಾರೆ. ಅವರು ಇಂದು ದೆಹಲಿಯಿಂದ ರಾಂಚಿಗೆ ಹಿಂತಿರುಗುವ ಸಾಧ್ಯತೆಯಿದೆ.

ಕಾಂಗ್ರೆಸ್‌ನ 16 ಶಾಸಕರಲ್ಲಿ ಕನಿಷ್ಠ ಎಂಟು ಮಂದಿ ಬಿಜೆಪಿಯ ಬಾಹ್ಯ ಬೆಂಬಲದೊಂದಿಗೆ ಸೋರೆನ್ ನೇತೃತ್ವದ ಹೊಸ ಸರ್ಕಾರ ಸೇರಲು ಮತುಕತೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹತೆಯನ್ನು ತಪ್ಪಿಸಲು ಕನಿಷ್ಠ 11 ಶಾಸಕರು ಕಾಂಗ್ರೆಸ್‌ ಪಕ್ಷದಿಂದ ಹೊರಹೋಗಬೇಕಾಗುತ್ತದೆ.

ಈಗ ಬರುತ್ತಿರುವ ಸುದ್ದಿಯ ಪ್ರಕಾರ ಕಲ್ಪನಾ ಸೊರೆನ್‌ ಅವರು ಮುಖ್ಯಮಂತ್ರಿಯಾದರೆ, ಹೇಮಂತ್ ಸೊರೆನ್ ಅವರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡುವ ಬಗ್ಗೆ ಮಾತುಕತೆ ನಡೆಯುತ್ತಿದೆ.