ಮಂಗಳೂರು: ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ನೂತನ ಬ್ಲಾಕ್ ಕಚೇರಿಯ ಉದ್ಘಾಟನಾ ಸಂದರ್ಭದಲ್ಲಿ ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರಾದ ಲುಕ್ಮಾನ್ ಅಡ್ಯಾರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಬಂಡಾರಿಯವರು ಶಾಲು ಹೊದಿಸಿ ಲುಕ್ಮಾನ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.
ಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್ ಹಾಗೂ ಕೆಪಿಸಿಸಿ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಪದ್ಮರಾಜ್ ಪೂಜಾರಿ ಮತ್ತು ಇನ್ನಿತರ ಕಾಂಗ್ರೆಸ್ ಮುಖಂಡರು ಧ್ವಜ ಹಸ್ತಾಂತರ ಮಾಡುವ ಮೂಲಕ ಸ್ವಾಗತ ಕೋರಿದರು.
ಈ ಸಂಧರ್ಭದಲ್ಲಿ ದ.ಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಮಮತಾ ಗಟ್ಟಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಬ್ ಕೋಟ್ಯಾನ್ ಹಾಗೂ ಯೂತ್ ಕಾಂಗ್ರೆಸ್ ಅಧ್ಯಕ್ಷ ಮುಫೀದ್ ಅಡ್ಯಾರ್ ಪದವು, ವಲಯ ಅಧ್ಯಕ್ಷ ರೊನಾಲ್ಡೊ ಸಲ್ಡಾಣ ಸಹಿತ ಇನ್ನಿತರ ಗಣ್ಯರು ಉಪಸ್ಥಿತರಿದ್ದರು



