Flash News

Karnataka: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ.

ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್​​ನಲ್ಲಿ ಸಿಎಂ ಘೋಷಿಸಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದರು.