ಮಂಗಳೂರು: ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರು ಕರಾವಳಿ ಉತ್ಸವ ಮೈದಾನದಲ್ಲಿ ಸಿದ್ಧತೆಗಳನ್ನು ವೀಕ್ಷಿಸಿ ಮಾಹಿತಿ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರದಂದು ಬೆಂಗಳೂರಿನಲ್ಲಿ ಸಹಕಾರ ಮಂತ್ರಿ ಹಾಗೂ ಮುಖ್ಯಮಂತ್ರಿಗಳೂ ಆಗಿರುವ ಸಿದ್ದರಾಮಯ್ಯನವರು ರಾಜ್ಯ ಸಹಕಾರ ಸಪ್ತಾಹ ಉದ್ಘಾಟನೆ ನೆರವೇರಿಸಿದ್ದಾರೆ. ಮೂರನೇ ದಿನದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಸಹಕಾರಿಗಳಿಂದ ಗ್ರಾಮೀಣ ಅಭಿವೃದ್ಧಿ ಮತ್ತು ಮಹಿಳೆಯರ ಅಭಿವೃದ್ಧಿ ನಿಟ್ಟಿನಲ್ಲಿ ಇಲ್ಲೇ ಕಾರ್ಯಕ್ರಮ ನಡೆಸಲು ಒಪ್ಪಿಕೊಂಡಿದ್ದೇವೆ. ರಾಜ್ಯಮಾತ್ರವಲ್ಲದೇ ದೇಶೀಯ ಮಟ್ಟದಲ್ಲಿ ಜನರಿಗೆ ಮುಟ್ಟುವಂತೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ತಂಡಗಳು ಭಾಗವಹಿಸಲಿದ್ದಾರೆ. ರಾಜ್ಯದಲ್ಲಿ ಸಹಕಾರ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ನಾವು ಕಳೆದ ವರ್ಷಗಳಿಂದ ಸಹಕಾರಿ ಮಾಣಿಕ್ಯ ಪ್ರಶಸ್ತಿ ನೀಡುತ್ತಿದ್ದೇವೆ. 2 ಸಹಕಾರಿ ಸಂಸ್ಥೆ ಮತ್ತು ಒಂದು ಕ್ರೆಡಿಟ್ ಸಹಕಾರಿ ಸಂಸ್ಥೆ ಹೀಗೆ ಮೂರು ಸಂಸ್ಥೆಗಳಿಗೆ ನೀಡುತ್ತಿದ್ದೇವೆ. ಮಹಿಳೆಯರ ಸ್ವಸಹಾಯ ಸಂಘಗಳನ್ನು ಗುರುತಿಸಲಿದ್ದೇವೆ.ಕೆಎಂಎಫ್ 2 ನೂತನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವರು. ಬೆಳಿಗ್ಗೆ 9 ಗಂಟೆಗೆ ಮೆರವಣಿಗೆ ಆರಂಭಗೊಂಡು 9.30ಕ್ಕೆ ಬಾವುಟ ಏರಿಸಲಾಗುವುದು. ಒಟ್ಟು 15,000ಕ್ಕೂ ಅಧಿಕ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. 10.30ಕ್ಕೆ ಸಭಾ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ ಎಂದು ರಾಜೇಂದ್ರ ಕುಮಾರ್ ವಿವರಿಸಿದರು.
ಉಭಯ ಜಿಲ್ಲೆಗಳಿಂದ ತಲಾ ಒಂದರಂತೆ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ದ.ಕ. ಜಿಲ್ಲೆಯಿಂದ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ಉಡುಪಿ ಜಿಲ್ಲೆಯಿಂದ ಕೋಟ ಸಹಕಾರಿ ವ್ಯವಸಾಯಿಕ ಸಂಘ ನಿ., ಹಾಗೂ ಕ್ರೆಡಿಟ್ ಕೋ-ಆಪರೇಟಿವ್ ಸಹಕಾರ ಸಂಘದಿಂದ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಆಯ್ಕೆಯಾಗಿದೆ. ಸಹಕಾರ ಮಾಣಿಕ್ಯ ಪ್ರಶಸ್ತಿಯ ಜೊತೆಗೆ 5 ಗ್ರಾಂ ಚಿನ್ನದ ಪದಕ, 10,000 ರೂ. ಹಾಗೂ ಪಾರಿತೋಷಕವನ್ನು ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದರು.


