Flash News

ಮಂಗಳೂರಿನ ನಟೋರಿಯಸ್ ರೌಡಿ ತುಕ್ಕ ನೌಫಾಲ್ ಬರ್ಬರ ಹತ್ಯೆ: ಈತನ ಹಿನ್ನೆಲೆ ಏನು ಗೊತ್ತಾ?

ಉಪ್ಪಳ: ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತನನ್ನು ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ.

ನೌಫಾಲ್ ಮಂಗಳೂರು ನಗರದ ಬಜಾಲ್ ಫೈಸಲ್ ನಗರ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಿದ ಬಳಿಕ ಕಾಸರಗೋಡು ಭಾಗದಲ್ಲಿ ಸಕ್ರಿಯವಾಗಿದ್ದ.‌

ನೌಫಾಲ್ 2017ರಲ್ಲಿ ಫರಂಗಿಪೇಟೆಯಲ್ಲಿ ನಡೆದ ಜಿಯಾ ಮತ್ತು ಇನ್ನೊಬ್ಬನ ಡಬಲ್ ಮರ್ಡರ್ ಕೇಸಿನಲ್ಲಿ ಪ್ರಮುಖ ಆರೋಪಿಯಾಗಿದ್ದ.‌ ಆ ಸಂದರ್ಭದಲ್ಲಿ ಮಾರಿಪಳ್ಳ ಜಬ್ಬಾರ್, ತಲ್ಲತ್ ಗ್ಯಾಂಗ್ ಜೊತೆಗೆ ಗುರುತಿಸಿಕೊಂಡಿದ್ದ.

ತಲ್ಲತ್ ಮತ್ತು ಜಬ್ಬಾರ್ ನ್ಯೂಟ್ರಲ್ ಆದ ಬಳಿಕ ನೌಫಾಲ್ ತನ್ನದೇ ತಂಡ ಕಟ್ಟಿಕೊಂಡು ಕೊಲೆಯತ್ನ, ವಸೂಲಿ, ಡ್ರಗ್ಸ್, ಅಕ್ರಮ ಗೋಲ್ಡ್ ವಹಿವಾಟಿನಲ್ಲಿ ಸಕ್ರಿಯವಾಗಿದ್ದ ಎನ್ನಲಾಗಿದೆ. ಕಂಕನಾಡಿ ನಗರ, ವಾಮಂಜೂರು, ಸುರತ್ಕಲ್, ಕಾವೂರು ಸೇರಿ ಹಲವಾರು ಕಡೆಗಳಲ್ಲಿ ಕೇಸುಗಳನ್ನು ಹೊಂದಿದ್ದಾನೆ. ಜಿಯಾ ಕೊಲೆ ಕೇಸಿನಲ್ಲಿ ಈತನೇ ಪ್ರಮುಖ ಆರೋಪಿಯಾಗಿದ್ದ ಎನ್ನಲಾಗಿದೆ.

ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಉಪ್ಪಳ ಗೇಟ್ ಬಳಿಗೆ ಕರೆಸಿದ್ದ ತಂಡ ಅಲ್ಲಿಯೇ ತಲವಾರುಗಳಿಂದ ಕಡಿದು ಹಾಕಿದೆ ಎನ್ನಲಾಗುತ್ತಿದೆ.