Flash News

ಮಂಗಳೂರು | ಅಶ್ರಫ್ ಗುಂಪು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು: ಕೇರಳದ ವಯನಾಡಿನ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

ಮನೀಶ್ ಶೆಟ್ಟಿ ಮತ್ತು ಅನಿಲ್ ಕುಮಾರ್‌ಗೆ ಮಂಗಳೂರಿನ 6ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 21 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅವರಲ್ಲಿ 8 ಮಂದಿಗೆ ಜಾಮೀನು ಲಭಿಸಿದೆ. ಉಳಿದಂತೆ 13 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮಂಗಳೂರು ನಗರದ ಕುಡುಪು ಬಳಿ ಕಳೆದ ಏಪ್ರಿಲ್ 27ರಂದು ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಕೇರಳದ ವಯನಾಡ್ ಮೂಲದ ಅಶ್ರಫ್‌ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಸ್ಥಳದಲ್ಲೇ ಅಶ್ರಫ್ ಮೃತಪಟ್ಟಿದ್ದರು. ಬಳಿಕ‌ ಆರೋಪಿಗಳನ್ನು ಬಂಧಿಸಲಾಗಿತ್ತು.