ಮಂಗಳೂರು: ರಾಜಧಾನಿ ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಹೆಚ್ಚುವರಿ ತಪಾಸಣೆಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದರಂತೆ, ಜಿಲ್ಲೆಯಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಇಲಾಖೆಯಿಂದ ಸ್ಪಷ್ಟ ಸೂಚನೆ ನೀಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು picketing point ಕರ್ತವ್ಯದಲ್ಲಿ ವಹಿಸಲಾಗುತ್ತದೆ. ನಿಯೋಜಿಸಲಾಗಿದೆ.
ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆ ಇರುವ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.


