ನವದೆಹಲಿ: ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಝಿ ಅವರಿಗೆ ದಿಲ್ಲಿ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ.
ಅಕ್ರಮ ಹಣ ವರ್ಗಾವಣೆಯ ಆರೋಪದಲ್ಲಿ ಎಂಕೆ ಫೈಝಿಯವರನ್ನು 2025ರ ಮಾರ್ಚ್ ತಿಂಗಳಲ್ಲಿ ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ED ಅಧಿಕಾರಿಗಳು ಬಂಧಿಸಿದ್ದರು.



