ಮಕ್ಕಾ: ವ್ಯಕ್ತಿಯೋರ್ವ ಮಸೀದಿಯ ಕಟ್ಟಡದ ಮೇಲಿನ ಮಹಡಿಯಿಂದ ಜಿಗಿಯಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ತನ್ನ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ವಿಶ್ವದ ಅತ್ಯಂತ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಸೌದಿ ಅರೇಬಿಯಾದ ಮಕ್ಕಾ ಮಸೀದಿಯಲ್ಲಿ ಗುರುವಾರ (ಡಿ.25) ನಡೆದಿದೆ.
ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು ವ್ಯಕ್ತಿಯೋರ್ವ ಮಸೀದಿ ಕಟ್ಟಡದ ಮೇಲಿನ ಮಹಡಿಯಿಂದ ಜಿಗಿಯಲು ಮುಂದಾಗಿದ್ದಾನೆ ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಆತನ ನೆಲಕ್ಕೆ ಬೀಳುವುದನ್ನು ತಪ್ಪಿಸಲು ಮುಂದಾಗಿದ್ದಾರೆ ಈ ವೇಳೆ ಮೇಲಿನಿಂದ ಜಿಗಿದ ವ್ಯಕ್ತಿ ಭದ್ರತಾ ಸಿಬ್ಬಂದಿಯ ಮೇಲೆಯೇ ಬಿದ್ದು ಇಬ್ಬರೂ ಗಾಯಗೊಂಡಿದ್ದಾರೆ. ಕೂಡಲೇ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಸದ್ಯ ಭದ್ರತಾ ಸಿಬ್ಬಂದಿ ಸೇರಿದಂತೆ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿಸಿದ್ದಾರೆ.
ಘಟನೆಯ ಕುರಿತು ಸೌದಿ ಅರೇಬಿಯಾದ ವಿಶೇಷ ಭದ್ರತಾ ಪಡೆ ತನಿಖೆ ಆರಂಭಿಸಿದ್ದು, ವ್ಯಕ್ತಿಯ ಗುರುತು ಮತ್ತು ಆತ್ಮಹತ್ಯೆ ಯತ್ನಕ್ಕೆ ಕಾರಣವೇನೆಂದು ಪತ್ತೆ ಹಚ್ಚಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.



