Flash News

Udupi | ನೌಕಾ ಸೇನಾ ಹಡಗುಗಳ ಗೌಪ್ಯ ಮಾಹಿತಿ ಪಾಕಿಸ್ತಾನಕ್ಕೆ ಹಂಚಿದ ಇಬ್ಬರ ಬಂಧನ

ರೋಹಿತ್, ಸಂತ್ರಿ ಬಂಧಿತ ಆರೋಪಿಗಳು

ಉಡುಪಿ: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್‌ ಮೂಲಕ ಅನಧಿಕೃತವಾಗಿ ಪಾಕಿಸ್ತಾನಕ್ಕೆ ಶೇ‌ರ್ ಮಾಡಿ, ಅಕ್ರಮ ಲಾಭ ಪಡೆದಿರುವ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಶಿಪ್ ಯಾರ್ಡ್‌ನ ಉದ್ಯೋಗಿಗಳಾದ ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಬಂಧಿತರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗಿ ಪೊಲೀಸ್‌ ಅಧೀಕ್ಷಕ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ