ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಈಗಾಗಲೇ ನಾಯಕತ್ವ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿದೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆ ಇದೀಗ ಮತ್ತಷ್ಟು ಪೋಸ್ಟರ್ಗಳು ಭಾರೀ ಸದ್ದು ಮಾಡುತ್ತಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಉಪಮುಖ್ಯಮಂತ್ರಿ (ಡಿಸಿಎಂ) ಮಾಡುವ ಕೂಗು ಜೋರಾಗಿದೆ. ಅವರ ಬೆಂಬಲಿಗರು ಚಾಮರಾಜಪೇಟೆ ಮತ್ತು ಜೆಜೆ ನಗರದಲ್ಲಿ “ಜಮೀರ್ ಅಹ್ಮದ್ ನೆಕ್ಸ್ಟ್ ಡಿಸಿಎಂ” ಎಂಬ ಬ್ಯಾನರ್‌ಗಳನ್ನು ಹಾಕಿದ್ದಾರೆ.
ಹೊಸ ವರ್ಷದ ಶುಭಾಶಯ ತಿಳಿಸುವ ಪೋಸ್ಟರ್‌ಗಳಲ್ಲಿ ಜಮೀರ್ ಅಹ್ಮದ್ರನ್ನು ಡಿಸಿಎಂ ಎಂದು ಬಿಂಬಿಸಲಾಗಿದೆ. ಇದು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಚಾಮರಾಜಪೇಟೆ ತುಂಬ ಜಮೀರ್ ಅಹ್ಮದ್ Upcoming DCM ಪೋಸ್ಟರ್ಗಳು ರಾರಾಜಿಸುತ್ತಿದೆ.
ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗಬಹುದು ಎಂಬ ಊಹಾಪೋಹಗಳು ಇವೆ. ಇದರ ನಡುವೆ ಅಲ್ಪಸಂಖ್ಯಾತ ಕೋಟಾದಡಿ ಜಮೀರ್ ಅಹ್ಮದ್ ಅವರನ್ನು ಡಿಸಿಎಂ ಮಾಡಬಹುದು ಎಂಬ ಟಾಕ್ ಶುರುವಾಗಿದೆ. ಸಂಪುಟ ಪುನಾರಚನೆ ಆದರೂ ಜಮೀರ್ ಅಹ್ಮದ್ಗೆ ಡಿಸಿಎಂ ಹುದ್ದೆ ಸಿಗಬಹುದು ಎಂಬ ಚರ್ಚೆಗಳು ಜೋರಾಗಿವೆ.
ಜಮೀರ್ ಅಹ್ಮದ್ ಕರ್ನಾಟಕ ಸರ್ಕಾರದಲ್ಲಿ ವಸತಿ ಸಚಿವರಾಗಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನೂ ನಿರ್ವಹಿಸುತ್ತಿದ್ದಾರೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಅವರು ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಬೆಂಬಲಿಗರು ಅವರನ್ನು “ಅಪ್‌ಕಮಿಂಗ್ ಡಿಸಿಎಂ” ಎಂದು ಬಿಂಬಿಸಿ ಪೋಸ್ಟರ್‌ಗಳನ್ನು ಹಾಕಿದ್ದಾರೆ. ಜೆಜೆ ನಗರ ರಸ್ತೆಯಲ್ಲಿ ಈ ಬ್ಯಾನರ್‌ಗಳು ರಾರಾಜಿಸುತ್ತಿವೆ.
ಪಕ್ಷದ ಆಂತರಿಕ ಚರ್ಚೆಗಳಲ್ಲಿ ಸಿದ್ದರಾಮಯ್ಯ ಬದಲು ಡಿಕೆ ಶಿವಕುಮಾರ್ ಸಿಎಂ ಆದರೆ, ಅಲ್ಪಸಂಖ್ಯಾತರ ಪ್ರಾತಿನಿಧ್ಯಕ್ಕಾಗಿ ಜಮೀರ್ ಅಹ್ಮದ್ ಡಿಸಿಎಂ ಮಾಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಬೆಂಬಲಿಗರ ಈ ಕ್ರಮ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.



