Flash News

ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ಪೀಕರ್ ಯು.ಟಿ. ಖಾದರ್‌ಗೆ ಗೌರವ ಡಾಕ್ಟರೇಟ್

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯವು ಸ್ಪೀಕರ್ ಯು.ಟಿ. ಖಾದರ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ.

ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಮತ್ತು ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ. ಟಿ.ಬಿ. ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಸಾಧಕರಾಗಿದ್ದಾರೆ.

ಅಕ್ಟೋಬರ್ 8 ರಂದು ಪೂರ್ವಾಹ್ನ 11:30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ನಡೆಯಲಿದೆ.